ನವದೆಹಲಿ: ಡಿಸೆಂಬರ್ ನಲ್ಲಿ ಬಾಲಿವುಡ್ ನಟಿ ಅನುಷ್ಕಾ ಜತೆ ಮದುವೆಯಾಗಲಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರದಾಸ್ ಅವರು ಕೊಹ್ಲಿ ಮೂರು ಟೆಸ್ಟ್ ಪಂದ್ಯಗಳಲ್ಲೂ ಆಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಟಿ20 ಹಾಗೂ ಶ್ರೀಲಂಕಾ ವಿರುದ್ಧದ ಮೊದಲೆರಡು ಟೆಸ್ಟ್ ಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿತ್ತು. ಈ ಸಂದರ್ಭದಲ್ಲಿ 3ನೇ ಟೆಸ್ಟ್ ವೇಳೆ ಕೊಹ್ಲಿಗೆ ವಿಶ್ರಾಂತಿ ನೀಡಲಾಗುವುದು ಎಂಬ ಸುದ್ದಿ ಹರಿದಾಡುತ್ತಿತ್ತು.
ಈ ಕುರಿತು ಸ್ಫಷ್ಟನೆ ನೀಡಿರುವ ಪ್ರಸಾದ್ 3ನೇ ಟೆಸ್ಟ್ ಗೂ ಕೊಹ್ಲಿಗೆ ನಾಯಕರಾಗಿರಲಿದ್ದಾರೆ. ಅವರಿಗೂ ವಿಶ್ರಾಂತಿಯ ಅವಶ್ಯವಿದ್ದು ಟೆಸ್ಟ್ ಸರಣಿ ಮುಕ್ತಾಯಗೊಂಡ ಬಳಿಕ ಆ ಕುರಿತು ಚಿಂತನೆ ನಡೆಸಲಾಗುವುದು ಎಂದರು.