ಕಾನ್ಪುರ: ಗ್ರೀನ್ ಪಾರ್ಕ್ ನಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ಜ ಪ್ರವಾಸಿ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
2ನೇ ಪಂದ್ಯವನ್ನು ಗೆದ್ದು ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿರುವ ನಾಯಕ ಕೊಹ್ಲಿ ಇಂದಿನ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಪುಣೆಯಲ್ಲಿ ಆಡಿದ್ದ ತಂಡವನ್ನೇ ಇಂದಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯಕ್ಕೆ ಉಳಿಸಿಕೊಂಡಿದ್ದಾರೆ.
ಇನ್ನು ನ್ಯೂಜಿಲೆಂಡ್ ತಂಡಕೂಡ ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿದಿದ್ದು, ಎರಡನೇ ಪಂದ್ಯದ ಸೋಲಿನ ಸೇಡು ತೀರಿಸಿಕೊಳ್ಳುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಭಾರತ ಈ ಪಂದ್ಯವನ್ನು ಗೆದ್ದರೆ ಸತತ 7 ಸರಣಿಗಳನ್ನು ಗೆದ್ದಂತಾಗುತ್ತದೆ. 2015ರಲ್ಲಿ ಭಾರತದಲ್ಲಿ ನಡೆದ ಸರಣಿಯಿಂದ ಈ ವರೆಗೂ ಭಾರತ ಏಕದಿನ ಸರಣಿ ಸೋತಿಲ್ಲ.