ನವದೆಹಲಿ: ಟೀಂ ಇಂಡಿಯಾದ ಹಿರಿಯ ಆಟಗಾರ ಆಶಿಶ್ ನೆಹ್ರಾ ಅವರು ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದು ಇಂದಿನ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಗಲಿದೆ.
ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ ಟಿ20 ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಸಹ ಆಟಗಾರರು ಆಶಿಶ್ ನೆಹ್ರಾಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಟೀಂ ಇಂಡಿಯಾ ಪರವಾಗಿ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಹ ಆಟಗಾರರ ಸಮ್ಮುಖದಲ್ಲಿ ಸ್ಮರಣಿಕೆ ಟ್ರೋಫಿಯನ್ನು ಹಸ್ತಾಂತರಿಸಿದರು.
1999ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಆಶಿಶ್ ನೆಹ್ರಾ 144 ಏಕದಿನ ಪಂದ್ಯಗಳನ್ನು ಆಡಿದ್ದ 157 ವಿಕೆಟ್ ಪಡೆದಿದ್ದಾರೆ. ಇನ್ನು 26 ಟಿ20 ಪಂದ್ಯ ಆಡಿರುವ ನೆಹ್ರಾ 34 ವಿಕೆಟ್ ಪಡೆದಿದ್ದಾರೆ. 38 ವರ್ಷದ ನೆಹ್ರಾ ತಮ್ಮ 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics