ಶಿಖರ್ ಧವನ್ 
ಕ್ರಿಕೆಟ್

ಶ್ರೀಲಂಕಾ ವಿರುದ್ಧದ ಮುಂದಿನ ಪಂದ್ಯಗಳಿಗೆ ಶಿಖರ್ ಧವನ್ ಅಲಭ್ಯ!

ಶ್ರೀಲಂಕಾ ವಿರುದ್ಧದ ಐದನೇ ಏಕದಿನ ಪಂದ್ಯ ಮತ್ತು ಏಕೈಕ ಟಿ20 ಪಂದ್ಯದಿಂದ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹೊರಗುಳಿಯಲಿದ್ದಾರೆ...

ನವದೆಹಲಿ: ಶ್ರೀಲಂಕಾ ವಿರುದ್ಧದ ಐದನೇ ಏಕದಿನ ಪಂದ್ಯ ಮತ್ತು ಏಕೈಕ ಟಿ20 ಪಂದ್ಯದಿಂದ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹೊರಗುಳಿಯಲಿದ್ದಾರೆ. 
ಶಿಖರ್ ಧವನ್ ಅವರ ತಾಯಿ ಅಸ್ವಸ್ಥಗೊಂಡಿದ್ದು  ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಲಂಕಾದಲ್ಲಿರುವ ಶಿಖರ್ ಧವನ್ ನಾಳೆ ತವರಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಮುಂದಿನ ಎರಡು ಪಂದ್ಯಗಳಿಗೂ ಧವನ್ ಅಲಭ್ಯರಾಗಲಿದ್ದಾರೆ. 
ಲಂಕಾ ವಿರುದ್ಧದ ನಾಲ್ಕು ಏಕದಿನ ಪಂದ್ಯಗಳಲ್ಲಿ ಶಿಖರ್ ಧವನ್ ಒಟ್ಟಾರೆ 190 ರನ್ ಗಳನ್ನು ಸಿಡಿಸಿದ್ದಾರೆ. ಇನ್ನು ಇದಕ್ಕೂ ಮುಂಚೆ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶಿಖರ್ ಧವನ್ 358 ರನ್ ಗಳನ್ನು ಸಿಡಿಸಿದ್ದರು. 
ಇನ್ನು ಶಿಖರ್ ಧವನ್ ಸ್ಥಾನವನ್ನು ಆರಂಭಿಕ ಆಟಗಾರ ಅಜಿಂಕ್ಯ ರಹಾನೆ ತುಂಬಲಿದ್ದಾರೆ. ನಾಳಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಜತೆಯಾಗಿ ರಹಾನೆ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!