ರೋಹಿತ್ ಶರ್ಮಾ, ಲಸಿತ್ ಮಲಿಂಗಾ
ಕೊಲಂಬೊ: ಭಾರತ ಮತ್ತು ಶ್ರೀಲಂಕಾ ವಿರುದ್ಧದ ನಾಲ್ಗನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಕಿತ್ತ ಶ್ರೀಲಂಕಾ ವೇಗಿ ಲಸಿತ್ ಮಲಿಂಗಾ ಅವರೊಂದಿಗೆ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಸಂಭ್ರಮಿಸಿದ್ದಾರೆ.
ಇದಕ್ಕೆ ಕಾರಣ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಲಸಿತ್ ಮಲಿಂಗಾ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಮೂಲಕ 300ನೇ ಪಡೆದ ಸಾಧನೆ ಮಾಡಿದರು. ಈ ಖುಷಿಯನ್ನು ಸಂಭ್ರಮಿಸಲು ರೋಹಿತ್ ಶರ್ಮಾ ಮಲಿಂಗಾ ಅವರನ್ನು ತಬ್ಬಿಕೊಂಡು ಅಭಿನಂದನೆ ಸಲ್ಲಿಸಿದರು.
ಲಂಕಾದ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಸಿತ್ ಮಲಿಂಗಾ ಅವರು 300ನೇ ವಿಕೆಟ್ ಕಿತ್ತು ಸಂಭ್ರಮಿಸಿದರು. ಇನ್ನು ಶ್ರೀಲಂಕಾ ತಂಡದಲ್ಲಿ 300 ವಿಕೆಟ್ ಪಡೆದ ಸಾಧನೆ ಮಾಡಿದ ಆಟಗಾರರಲ್ಲಿ ಮಲಿಂಗಾ ನಾಲ್ಕನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಲಸಿತ್ ಮಲಿಂಗಾ 203 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 300 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 38 ರನ್ ಗಳಿಗೆ 6 ವಿಕೆಟ್ ಪಡೆದಿರುವುದು ಶ್ರೇಷ್ಠ ಸಾಧನೆ ಮಾಡಿದ್ದಾರೆ.
ಲಂಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 376 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವನ್ನು ಟೀಂ ಇಂಡಿಯಾ 207 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 168 ರನ್ ಗಳಿಂದ ಭರ್ಜರಿ ಜಯ ಗಳಿಸಿತ್ತು.