ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಒಂದೊಂದೆ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದಾರೆ.
ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂಬರ್ 1 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಜತೆಗೆ ಒಟ್ಟಾರೆ 887 ಅಂಕವನ್ನು ಹೊಂದುವ ಮೂಲಕ ಸಚಿನ್ ತೆಂಡೂಲ್ಕರ್ 1998ರಲ್ಲಿ ಸಂಪಾದಿಸಿದ್ದ ಅಂಕವನ್ನು ಸಮಗಟ್ಟಿದ್ದಾರೆ. ಭಾರತದ ಮಟ್ಟಿಗೆ ಈ ಸಾಧನೆ ಮಾಡಿದ್ದು ಈ ಇಬ್ಬರೇ ಆಟಗಾರರು.
ಇನ್ನು ಲಂಕಾ ಏಕದಿನ ಸರಣಿಯಲ್ಲಿ ಒಟ್ಟು 15 ವಿಕೆಟ್ ಗಳನ್ನು ಪಡೆಯುವ ಮೂಲಕ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬೂಮ್ರಾ ಟಾಪ್ 10ನಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. 27 ಸ್ಥಾನಗಳ ಏರಿಕೆ ಕಂಡಿರುವ ಬುಮ್ರಾ ವೃತ್ತಿ ಜೀವನದಲ್ಲಿ ಶ್ರೇಷ್ಠ ಶ್ರೇಯಾಂಕ ಪಡೆದಿರುವ ಸಾಧನೆ ಮಾಡಿದ್ದಾರೆ.