ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 3-0 ಜಯ ಸಾಧಿಸಿದ್ದು ತಂಡ ನಂಬರ್ 1 ಸ್ಥಾನ ಕಾಯ್ದುಕೊಳ್ಳಲು ಸಹಕಾರಿಯಾಗಿದ್ದು ಭಾರತ 125 ಅಂಕಗಳನ್ನು ಹೊಂದಿದೆ.
ಇನ್ನು ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತ ಆಸ್ಟ್ರೇಲಿಯಾ ನಾಲ್ಕನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಕುಸಿದಿದೆ.