ನವದೆಹಲಿ: ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗಳ ವೇಳಾ ಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಿಡುಗಡೆ ಮಾಡಿದೆ.
ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಐದು ಏಕದಿನ ಪಂದ್ಯ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೆಪ್ಟೆಂಬರ್ 17ರಿಂದ ಪ್ರಾರಂಭಗೊಳ್ಳಲಿದೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿ ನಂತರ ಭಾರತ ನ್ಯೂಜಿಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
ಆಸ್ಟ್ರೇಲಿಯಾದ ವಿರುದ್ಧದ ಐದು ಏಕದಿನ ಪಂದ್ಯಗಳು ಚೆನ್ನೈ, ಕೋಲ್ಕತ್ತಾ, ಇಂದೋರ್, ಬೆಂಗಳೂರು ಮತ್ತು ನಾಗಪುರದಲ್ಲಿ ನಡೆಯಲಿವೆ. ಇನ್ನು ಮೂರು ಟಿ20 ಪಂದ್ಯಗಳು ರಾಂಚಿ, ಗುವಾಹಟಿ, ಹೈದರಾಬಾದ್ ನಲ್ಲಿ ನಡೆಯಲಿವೆ.
ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳು ಮುಂಬೈ, ಪುಣೆ ಉತ್ತರಪ್ರದೇಶದಲ್ಲಿ ನಡೆಯಲಿವೆ. ನಂತರ ಮೂರು ಟಿ20 ಪಂದ್ಯಗಳು ದೆಹಲಿ, ರಾಜ್ ಕೋಟ್ ಮತ್ತು ತಿರುವನಂತಪುರಂನಲ್ಲಿ ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics