ಟೀಂ ಇಂಡಿಯಾ 
ಕ್ರಿಕೆಟ್

ಬ್ಯಾಕ್ ಟು ಬ್ಯಾಕ್ ಸರಣಿ ಬೇಡ; ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ನೀಡಿ: ರವಿ ಶಾಸ್ತ್ರಿ

ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ನೀಡಬೇಕು. ಅಂತಾರಾಷ್ಟ್ರೀಯ ಪಂದ್ಯಾವಳಿಗಳ ವೇಳಾಪಟ್ಟಿಯನ್ನು ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಯ ಕೆಲಸದ...

ನವದೆಹಲಿ: ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ನೀಡಬೇಕು. ಅಂತಾರಾಷ್ಟ್ರೀಯ ಪಂದ್ಯಾವಳಿಗಳ ವೇಳಾಪಟ್ಟಿಯನ್ನು ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಯ ಕೆಲಸದ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಅಗತ್ಯ ವಿಶ್ರಾಂತಿ ಸಿಗುವಂತೆ ರೂಪಿಸಬೇಕು ಎಂದು ಟೀಂ ಇಂಡಿಯಾದ ಪ್ರಧಾನ ಕೋಚ್ ರವಿಶಾಸ್ತ್ರಿ ಕೇಳಿಕೊಂಡಿದ್ದಾರೆ. 
ಸುಪ್ರೀಂಕೋರ್ಟ್ ನೇಮಿತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಡಳಿತ ಸಮಿತಿ ಹಾಗೂ ಬಿಸಿಸಿಐ ಸಿಇಓ ರಾಹುಲ್ ಜೊಹ್ರಿ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಶಾಸ್ತ್ರಿ ತಮ್ಮ ಮನವಿ ಸಲ್ಲಿಸಿದರು. ಶ್ರೀಲಂಕಾ ಪ್ರವಾಸದಿಂದ ಈಗಷ್ಟೇ ವಾಪಸಾಗಿರುವ ತಂಡ ಸೆಪ್ಟೆಂಬರ್ 17ರಿಂದ ಆಸ್ಟ್ರೇಲಿಯಾ ವಿರುದ್ಧ ಸೀಮಿತ ಓವರ್ ಸರಣಿಯಲ್ಲಿ ಕಣಕ್ಕಳಿಯಲಿದೆ.
ಇದೇ ತಿಂಗಳ 17ರಿಂದ ಆಸ್ಟ್ರೇಲಿಯಾ ವಿರುದ್ಧ ಐದು ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಈ ರೀತಿಯ ವೇಳಾಪಟ್ಟಿ ಹಾಗೂ ಇಂಗ್ಲೆಂಡ್ ತನ್ನ ಆಟಗಾರರಿಗೆ ಹೆಚ್ಚಿನ ವಿಶಾಂತ್ರಿ ನೀಡುತ್ತದೆ. ಬಿಸಿಸಿಐ ಕೂಡ ಇದೇ ಮಾದರಿ ಅನುಸರಿಸಬೇಕು ಎಂದು ಶಾಸ್ತ್ರಿ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ