ಆಸ್ಟ್ರೇಲಿಯಾ ವಿರುದ್ಧದ ಮೊದಲ 3 ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)...
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎನ್ಕೆ ಪ್ರಸಾದ್ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದರು. ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದ್ದು ಶ್ರೀಲಂಕಾ ವಿರುದ್ಧದ ತಂಡವನ್ನೇ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಸಲಿದ್ದು ಭಾರತದ ಸ್ಟಾರ್ ಸ್ಪಿನ್ನರ್ ಗಳಾದ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ.
ಮೊದಲ ಮೂರು ಏಕದಿನ ಪಂದ್ಯಗಳು ಚೆನ್ನೈ, ಕೋಲ್ಕತ್ತಾ ಮತ್ತು ಇಂದೋರ್ ನಲ್ಲಿ ನಡೆಯಲಿದೆ. ನಂತರ ಎರಡು ಪಂದ್ಯಗಳು ಬೆಂಗಳೂರು ಮತ್ತು ನಾಗಪುರದಲ್ಲಿ ನಡೆಯಲಿವೆ.
ಟೀಂ ಇಂಡಿಯಾ ಏಕದಿನ ತಂಡ
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ. ಕೆಎಲ್ ರಾಹುಲ್, ಶಿಖರ್ ಧವನ್, ಎಂಎಸ್ ಧೋನಿ(ವಿಕೆಟ್ ಕೀಪರ್), ಮನೀಶ್ ಪಾಂಡ್ಯೆ, ಕೇದಾರ್ ಜಾದವ್, ಅಜಿಂಕ್ಯಾ ರಹಾನೆ, ಹಾರ್ದಿಕ್ ಪಾಂಡ್ಯಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯಜುವೇಂದರ್ ಚಹಾಲ್, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ.