ಡಿಯೊನ್ ತಾಲ್ಜರ್ಡ್ 
ಕ್ರಿಕೆಟ್

10 ವರ್ಷದಲ್ಲಿ 150 ಬಾರಿ ಅತ್ಯಾಚಾರ: ಆಫ್ರಿಕಾ ಮಾಜಿ ಆಟಗಾರನಿಗೆ 18 ವರ್ಷ ಜೈಲು

ದಕ್ಷಿಣ ಆಫ್ರಿಕಾದ ದೇಶಿಯ ಕ್ರಿಕೆಟ್ ಆಟಗಾರನೊಬ್ಬ ಮಹಿಳೆಯೊಬ್ಬಳ ಮೇಲೆ 10 ವರ್ಷಗಳಲ್ಲಿ 150ಕ್ಕೂ ಹೆಚ್ಚು ಬಾರಿ ಬರ್ಬರವಾಗಿ ಅತ್ಯಾಚಾರ ಎಸಗಿ ಇದೀಗ ಜೈಲು...

ಮ್ಯಾಂಚೆಸ್ಟರ್: ದಕ್ಷಿಣ ಆಫ್ರಿಕಾದ ದೇಶಿಯ ಕ್ರಿಕೆಟ್ ಆಟಗಾರನೊಬ್ಬ ಮಹಿಳೆಯೊಬ್ಬಳ ಮೇಲೆ 10 ವರ್ಷಗಳಲ್ಲಿ 150ಕ್ಕೂ ಹೆಚ್ಚು ಬಾರಿ ಬರ್ಬರವಾಗಿ ಅತ್ಯಾಚಾರ ಎಸಗಿ ಇದೀಗ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 
47 ವರ್ಷದ ಡಿಯೊನ್ ತಾಲ್ಜರ್ಡ್ 2002 ರಿಂದ 2012ರವರೆಗೆ ಅಂದರೆ ಸುಮಾರು 10 ವರ್ಷಗಳ ಕಾಲ ಮಹಿಳೆಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ತೋರಿದಾಗ ಗಂಭೀರ ಹಲ್ಲೆ ನಡೆಸಿ ಕತ್ತು ಹಿಸುಕಿ ಕಾಲು ಮುರಿದು ಹಾಕಿದ್ದ. 
ಇದಾದ ಮೂರು ವರ್ಷಗಳ ಬಳಿಕ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣದ ತನಿಖೆ ಮತ್ತು ವಿಚಾರಣೆ ವೇಳೆ ತಾಲ್ಜರ್ಡ್ 19 ಬಾರಿ ಅತ್ಯಾಚಾರ ಎಸಗಿರುವುದು ಧೃಡಪಟ್ಟ ಹಿನ್ನೆಲೆಯಲ್ಲಿ ಮ್ಯಾಂಚೆಸ್ಟರ್ ಕ್ರೌನ್ ನ್ಯಾಯಾಲಯ ಆತನಿಗೆ 18 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
1993 ಮತ್ತು 1999ರವರೆಗೆ ಫಸ್ಟ್ ಕ್ಲಾಸ್ ನಲ್ಲಿ 25 ಪಂದ್ಯ ಆಡಿದ್ದ ತಾಲ್ಜರ್ಡ್ 60 ವಿಕೆಟ್ ಗಳನ್ನು ಪಡೆದಿದ್ದ. ಇನ್ನು ಎರಡು ಬಾರಿ ಐದು ವಿಕೆಟ್ ಗೊಂಚಲನ್ನು ಪಡೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ