ವೀರೇಂದ್ರ ಸೆಹ್ವಾಗ್ 
ಕ್ರಿಕೆಟ್

ಬಿಸಿಸಿಐ ಬೆಂಬಲವಿಲ್ಲದ ಕಾರಣ ನನಗೆ ಕೋಚ್ ಹುದ್ದೆ ಕೈ ತಪ್ಪಿತ್ತು: ಸೆಹ್ವಾಗ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಪ್ರೋತ್ಸಾಹದ ಕೊರತೆಯಿಂದಾಗಿ ನನಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಕೈ ತಪ್ಪಿತ್ತು...

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಪ್ರೋತ್ಸಾಹದ ಕೊರತೆಯಿಂದಾಗಿ ನನಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಕೈ ತಪ್ಪಿತ್ತು. ಆದರೆ ಮುಂದೆಂದು ನಾನು ತಂಡದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. 
ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ)ಯ ಮುಖ್ಯಸ್ಥರಲ್ಲಿ ಒಬ್ಬರಾದ ಸೌರವ್ ಗಂಗೂಲಿ ಅವರ ಪ್ರಬಲ ವಿರೋಧದ ನಡುವೆಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಣತಿಯಂತೆ ರವಿಶಾಸ್ತ್ರಿ ಅವರನ್ನು ತಂಡದ ಮುಖ್ಯ ಕೋಚ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು. 
ಭಾರತೀಯ ಕ್ರಿಕೆಟ್ ತಂಡಕ್ಕೆ ತರಬೇತುದಾರನಾಗಬೇಕೆಂದು ನಾನು ಯೋಚಿಸಿರಲಿಲ್ಲ. ನನಗೆ ತಂಡದ ಕೋಚ್ ಆಗಲು ಆಫರ್ ನೀಡಲಾಗಿತ್ತು. ಬಿಸಿಸಿಐನ ಕಾರ್ಯದರ್ಶಿ ಅಮಿತಾಬ್ ಚೌಧರಿ ಮತ್ತು ಜಿಎಂ(ಗೇಮ್ ಡೆವಲಪ್‌ಮೆಂಟ್‌) ಎಂವಿ ಶ್ರೀಧರ್ ಅವರು ನನ್ನ ಬಳಿ ಬಂದ ಆಫರ್ ಬಗ್ಗೆ ಯೋಚಿಸುವಂತೆ ಕೋರಿದ್ದರು. ಅಂತೇ ನಾನು ಕೆಲ ದಿನಗಳ ಬಳಿಕ ತಂಡದ ಕೋಚ್ ಹುದ್ದೆಗೆ ಅರ್ಜಿ ಹಾಕಿದ್ದೇ ಎಂದು ಹೇಳಿದ್ದಾರೆ. 
ತಂಡದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನಾನು ತಂಡದ ನಾಯಕ ವಿರಾಟ್ ಕೊಹ್ಲಿಯವರನ್ನು ಸಂಪರ್ಕಿಸಿದ್ದೇ. ಅದಕ್ಕೆ ಕೊಹ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದರು. ಅದಾದ ಬಳಿಕ ನಾನು ಅರ್ಜಿ ಸಲ್ಲಿಸಿದ್ದೇ. ನನ್ನ ಅಭಿಪ್ರಾಯ ಕೇಳುವುದಿದ್ದರೆ ನನಗೆ ಕೋಚ್ ಹುದ್ದೆ ಮೇಲೆ ಆಸಕ್ತಿ ಇರಲಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್