ಟಾಸ್ ಪ್ರಕ್ರಿಯೆ ವೇಳೆ ಕೊಹ್ಲಿ ಹಾಗೂ ಸ್ಟೀವನ್ ಸ್ನಿತ್ 
ಕ್ರಿಕೆಟ್

ಮೊದಲ ಏಕದಿನ: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಆಸ್ಟ್ರೇಲಿಯಾ ತಂಡದ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದ್ದು, ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚೆನ್ನೈ: ಆಸ್ಟ್ರೇಲಿಯಾ ತಂಡದ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದ್ದು, ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಏಕದಿನ ಮಾದರಿಯಲ್ಲಿ ನಂಬರ್ 1 ಸ್ಥಾನಕ್ಕೇರಲು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿವೆ. ಈಗಾಗಲೇ ಭಾರತ ತನ್ನ ಈ ಹಿಂದಿನ ಶ್ರೀಲಂಕಾ ಪ್ರವಾಸವನ್ನು ವೈಟ್ ವಾಶ್ ಮಾಡಿದ ಹುಮ್ಮಸ್ಸಿನಲ್ಲಿದ್ದರೆ, ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಾಕಷ್ಟು ಪ್ರಯಾಸ ಪಟ್ಟಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತವೇ ಗೆಲ್ಲುವ ನಿಚ್ಚಿನ ತಂಡವಾಗಿದೆಯಾದರೂ ಯಾವುದೇ ಹಂತದಲ್ಲಿ ಆಸ್ಟ್ರೇಲಿಯಾ ತಂಡ ತಿರುಗೇಟು ನೀಡುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಭಾರತದ ಪಾಲಿಗೆ ಬೌಲರ್ ಅಕ್ಸರ್ ಪಟೇಲ್ ಗೈರು ಕೊಂಚ ಹಿನ್ನಡೆಯಾಗಿದೆಯಾದರೂ ಉತ್ತಮ ಫಾರ್ಮ್ ನಲ್ಲಿರುವ ಚಾಹಲ್ ಹಾಗೂ ಕುಲದೀಪ್ ಯಾದವ್ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. ಮಾಜಿ ನಾಯಕ ಧೋನಿ ಅತ್ಯುತ್ತಮ ಫಾರ್ಮ್ ನಲ್ಲಿದ್ದು, ನಾಯಕ ವಿರಾಟ್ ಕೊಹ್ಲಿ ಕೂಡ ತಮ್ಮ ಉತ್ತಮ ಫಾರ್ಮ್ ಮುಂದುವರೆಸುವ ಸಾಧ್ಯತೆ ಇದೆ. ತಂಡದಲ್ಲಿ ತಮ್ಮ ಸ್ಥಾನ ಗಟ್ಟಿಗೊಳಿಸಲು ಸಾಹಸ ಪಡುತ್ತಿರುವ ಮನೀಶ್ ಪಾಂಡೆ ಅವರಿಂದಲೂ ಉತ್ತಮ ಬ್ಯಾಟಿಂಗ್ ನಿರೀಕ್ಷಿಸಬಹುದಾಗಿದೆ.

ಆಸ್ಟ್ರೇಲಿಯಾ ಪರ ಅಗರ್, ಫಿಂಚ್, ಹ್ಯಾಂಡ್ಸ್ಕಾಂಬ್ ಮತ್ತು ರಿಚರ್ಡ್ಸನ್ ತಂಡಕ್ಕೆ ಅಲಭ್ಯರಾಗಿದ್ದು, ಕಾರ್ಟ್ರೈಟ್ ಏಕದಿನ ಮಾದರಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಹಿಂದೆ ಭಾರತದ ವಿರುದ್ಧದ ಸರಣಿಗಳಲ್ಲಿ ಮಿಂಚಿದ್ದ ಕೌಲ್ಟರ್-ನೈಲ್, ಜೇಮ್ಸ್ ಫಾಲ್ಕ್ನರ್ ತಂಡದಲ್ಲಿದ್ದು ಆಸಿಸ್ ತಂಡದ ವಿಶ್ವಾಸ ಹೆಚ್ಚಾಗುವಂತೆ ಮಾಡಿದ್ದಾರೆ.

ಒಟ್ಟಾರೆ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಬಹುದಾಗಿದೆ.
ತಂಡಗಳು ಇಂತಿವೆ
ಭಾರತ ತಂಡ:

ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ (ನಾಯಕ), ಮನೀಶ್ ಪಾಂಡೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯಾ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಯುಜುವೇಂದ್ರ  ಚಾಹಲ್, ಜಸ್ ಪ್ರೀತ್ ಬುಮ್ರಾ

ಆಸ್ಟ್ರೇಲಿಯಾ ತಂಡ:
ಡೇವಿಡ್ ವಾರ್ನರ್, ಹಿಲ್ಟನ್ ಕಾರ್ಟ್ರೈಟ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಜೇಮ್ಸ್ ಫಾಲ್ಕ್ನರ್, ಪ್ಯಾಟ್ ಕಮ್ಮಿನ್ಸ್, ನಾಥನ್  ಕೌಲ್ಟರ್-ನೈಲ್, ಆಡಮ್ ಜಂಪಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ