ಸಿಡ್ನಿ: ಆಸ್ಟ್ರೇಲಿಯಾ ತಂಡದ ಮಾಜಿ ಟೆಸ್ಟ್ ಲೆಗ್ ಸ್ಪಿನ್ನರ್ ಬಾಬ್ ಹಾಲೆಂಡ್ ಅವರು ವಿಧಿವಶರಾಗಿದ್ದಾರೆ.
70 ವರ್ಷದ ಬಾಬ್ ಹಾಲೆಂಡ್ ಅವರು ಬ್ರೈನ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಕಳೆದ ವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಕ್ರೇಗ್ ತಿಳಿಸಿದ್ದಾರೆ.
1984ರಲ್ಲಿ ಬಾಬ್ ಹಾಲೆಂಡ್ ಅವರು ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು. ಇನ್ನು 1985ರಲ್ಲಿ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಸಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಜಯ ತಂದಕೊಟ್ಟಿದ್ದರು.
ಆಸ್ಟ್ರೇಲಿಯಾ ಪರ ಒಟ್ಟು 11 ಟೆಸ್ಟ್ ಪಂದ್ಯಗಳನ್ನು ಆಡಿದ್ದ ಬಾಬ್ ಹಾಲೆಂಡ್ 34 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು ಫಸ್ಟ್ ಕ್ಲಾಸ್ ಕ್ರಿಕೆಟ್ ನಲ್ಲಿ 95 ಪಂದ್ಯಗಳನ್ನು ಆಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics