4 ಬಾರಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಸ್ಫೋಟಕ ಬ್ಯಾಟ್ಸ್ಮನ್ ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮನ್ ಎಂದೇ ಖ್ಯಾತರಾಗುತ್ತಿರುವ ಪಾಂಡ್ಯ...
ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮನ್ ಎಂದೇ ಖ್ಯಾತರಾಗುತ್ತಿರುವ ಪಾಂಡ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ನಾಲ್ಕು ಬಾರಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಸಾಧನೆ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಇದೇ ವರ್ಷದಲ್ಲಿ ನಾಲ್ಕು ಬಾರಿ ಹ್ಯಾಟ್ರಿಕ್ ಸಿಕ್ಸ್ ಬಾರಿಸಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಎರಡು ಬಾರಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ್ದು, ಇನ್ನು ಶ್ರೀಲಂಕಾ ವಿರುದ್ಧ ಒಂದು ಹಾಗೂ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ್ದಾರೆ.
ಟೀಂ ಇಂಡಿಯಾ ಪರ ಕೇವಲ 14 ಪಂದ್ಯಗಳನ್ನಾಡಿರುವ ಹಾರ್ದಿಕ್ ಪಾಂಡ್ಯ ನಾಲ್ಕು ಅರ್ಧ ಶತಕ ಸಿಡಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 66 ಎಸೆತಗಳಲ್ಲಿ 5 ಸಿಕ್ಸ್ ಮತ್ತು 5 ಬೌಂಡರಿ ಒಳಗೊಂಡಂತೆ ಭರ್ಜರಿ 83 ರನ್ ಸಿಡಿಸಿದ್ದಾರೆ.