ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 100ನೇ ಅರ್ಧ ಶತಕ ಸಿಡಿಸಿದ ಎಂಎಸ್ ಧೋನಿ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 100ನೇ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ...

ಎಂಎಸ್ ಧೋನಿ
Vishwanath S
Updated On : 18 Sept 2017, 8:43 am
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 100ನೇ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. 
36 ವರ್ಷದ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ನ ಮೂರು ಮಾದರಿಯಲ್ಲೂ 100ನೇ ಅರ್ಧ ಶತಕ ಸಿಡಿಸಿದ 13ನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದು ಭಾರತೀಯ ಕ್ರಿಕೆಟ್ ನಲ್ಲಿ ನಾಲ್ಕನೇ ಆಟಗಾರನಾಗಿದ್ದಾರೆ. ಟೀಂ ಇಂಡಿಯಾ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (164), ರಾಹುಲ್ ದ್ರಾವಿಡ್ (146), ಸೌರವ್ ಗಂಗೂಲಿ (107) ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. 
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ 302 ಪಂದ್ಯಗಳನ್ನು ಆಡಿರುವ ಧೋನಿ ಆ ಪೈಕಿ 66 ಅರ್ಧ ಶತಕ ಸಿಡಿಸಿದ್ದಾರೆ. ಇನ್ನು 90 ಟೆಸ್ಟ್ ಪಂದ್ಯದಲ್ಲಿ 33 ಹಾಗೂ ಅಂತಾರಾಷ್ಟ್ರೀಯ ಟಿ20ಯಲ್ಲಿ 1 ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ 9737 ರನ್ ಗಳಿಸಿರುವ ಧೋನಿ 10 ಸಾವಿರ ಮೈಲಿಗಲ್ಲು ದಾಟಲು ಇನ್ನು 263 ರನ್ ಗಳನ್ನು ಸಿಡಿಸಿಬೇಕಿದೆ. 

Advertisement

Advertisement

ಚೆನ್ನೈನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಧೋನಿ 79 ರನ್ ಗಳನ್ನು ಸಿಡಿಸುವ ಮೂಲಕ ಈ ಸಾಧನೆಯನ್ನು ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement