ಕರಾಚಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಆರಾದಿಸುವವರು ಯಾರು ಇಲ್ಲ ಎಂದೇ ಹೇಳಬಹುದು. ಟೀಂ ಇಂಡಿಯಾದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದಲ್ಲೂ ಕೊಹ್ಲಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಲ್ಲಿದ್ದಾರೆ.
ಆದರೆ ವಿಚಾರ ಅದಲ್ಲ. ಸದ್ಯ ಪಾಕಿಸ್ತಾನ ವಿಶ್ವ ಇಲೆವೆನ್ ಜತೆ ಟಿ20 ಪಂದ್ಯವಾಡುತ್ತಿದ್ದರೆ ಪಾಕ್ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿಗಾಗಿ ಪರಿತಪಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೇ ಪಾಕಿಸ್ತಾನದ ಪೊಲೀಸ್ ಒಬ್ಬರು ಕೈಯಲ್ಲಿ ಬ್ಯಾನರ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅದರಲ್ಲಿ ಕೊಹ್ಲಿ ಮ್ಯಾರಿ ಮೀ ಎಂದು ಬರೆಯಲಾಗಿದ್ದು ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಫೋಟೋವನ್ನು ಸ್ವತಃ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಶಹರ್ಯಾರ್ ಖಾನ್ ಅವರೇ ಟ್ವೀಟ್ ಮಾಡಿದ್ದು ಇದಕ್ಕೆ ಟ್ವೀಟರಿಗರು ವಿನೋದ ಟ್ವೀಟ್ ಗಳನ್ನು ಮಾಡುತ್ತಿದ್ದಾರೆ.