ಎಂಎಸ್ ಧೋನಿ 
ಕ್ರಿಕೆಟ್

ಪದ್ಮ ಭೂಷಣ ಪ್ರಶಸ್ತಿಗೆ ಬಿಸಿಸಿಐನಿಂದ ಎಂಎಸ್ ಧೋನಿ ಹೆಸರು ಪ್ರಸ್ತಾಪ

ದೇಶದ ಮೂರನೇ ಅತಿ ದೊಡ್ಡ ನಾಗರಿಕ ಪ್ರಶಸ್ತಿ ಪದ್ಮ ಭೂಷಣ ಪ್ರಶಸ್ತಿ ಗಾಗಿ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶಿಪಾರಸ್ ಮಾಡಿದೆ.

ನವದೆಹಲಿ: ದೇಶದ ಮೂರನೇ ಅತಿ ದೊಡ್ಡ ನಾಗರಿಕ ಪ್ರಶಸ್ತಿ ಪದ್ಮ ಭೂಷಣ ಪ್ರಶಸ್ತಿ ಗಾಗಿ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶಿಪಾರಸ್ ಮಾಡಿದೆ.
ಭಾರತೀಯ ಕ್ರಿಕೆಟ್‌ಗೆ ಧೋನಿ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ವಿಶ್ವಕಪ್ ವಿಜೇತ ತಂದದ ನಾಯಕನಾಗಿದ್ದ  ಧೋನಿ ಹೆಸರನ್ನು ನಾಮನಿರ್ದೇಶನ ಮಾಡಲು ಬಿಸಿಸಿಐ ನಿರ್ಧರಿಸಿದೆ.
ಬಿಸಿಸಿಐ ಮಂಡಳಿ ಸಭೆಯಲ್ಲಿ ಧೋನಿ ಹೆಸರನ್ನು ಶಿಫಾರಸು ಮಾದಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ 
ಧೋನಿ ನಾಯಕತ್ವದಲ್ಲಿ ಭಾರತ 2007 ಟ್ವೆಂಟಿ-20 ವಿಶ್ವಕಪ್ ಮತ್ತು 2011 ಏಕದಿನ ವಿಶ್ವಕಪ್ ಗೆದ್ದಿತ್ತು.
ಧೋನಿ 302 ಏಕದಿನದಲ್ಲಿ 9737 ರನ್ ಮತ್ತು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್ ಗಳಿಸಿದ್ದಾರೆ. ಅಲ್ಲದೆ 78 ಟ್ವೆಂಟಿ-20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 1212 ರನ್ ಗಳಿಸಿದ್ದಾರೆ.
ಇನ್ನು 16 ಅಂತರಾಷ್ಟ್ರೀಯ ಶತಕ (ಟೆಸ್ಟ್‌ ನಲ್ಲಿ 6, ಏಕದಿನದಲ್ಲಿ 10) ಮತ್ತು 100 ಅಂತರಾಷ್ಟ್ರೀಯ ಅರ್ಧ ಶತಗಳನ್ನು ಗಳಿಸಿದ್ದಾರೆ.
ವಿಕೆಟ್ ಕೀಪರ್ ಆಗಿ ಧೋನಿ 584 ಕ್ಯಾಚ್‌ ಗಳನ್ನು ಹಿಡಿದಿದ್ದು ಇದರಲ್ಲಿ ಟೆಸ್ಟ್‌ನದು 256 ಏಕದಿನದ್ 285 ಮತ್ತು ಟ್ವೆಂಟಿ-20ಯ 43 ಕ್ಯಾಚ್‌ ಗಳು ಸೇರಿವೆ.
ಇದಾಗಲೇ ಅರ್ಜುನ, ರಾಜೀವ್ ಗಾಂಧಿ ಖೇಲ್ ರತ್ನ ಮತ್ತು ಪದ್ಮಶ್ರೀ ಪುರಸ್ಕಾರಕ್ಕೆ ಬಾಜನರಾಗಿರುವ ಧೋನಿ ಪದ್ಮ  ಭುಷಣ ಪ್ರಶಸ್ತಿಗೆ ಅರ್ಹವಾದರೆ ಈ ಪ್ರಶಸ್ತಿ ಪಡೆದ 11ನೇ  ಕ್ರಿಕೆಟಿಗರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT