ಸಂಗ್ರಹ ಚಿತ್ರ 
ಕ್ರಿಕೆಟ್

ಎಂಎಸ್ ಧೋನಿ, ರಾಹುಲ್ ದ್ರಾವಿಡ್ ನಾಯಕತ್ವ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ!

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ನೂತನ ದಾಖಲೆ ಹೊಸ್ತಿಲಲ್ಲಿದ್ದು, ಮಾಜಿ ನಾಯಕರಾದ ಎಂಎಸ್ ಧೋನಿ, ರಾಹುಲ್ ದ್ರಾವಿಡ್ ನಿರ್ಮಾಣ ಮಾಡಿದ್ದ ದಾಖಲೆಯೊಂದನ್ನು ಕೊಹ್ಲಿ ಸರಿಗಟ್ಟಿದ್ದಾರೆ.

ಇಂದೋರ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ನೂತನ ದಾಖಲೆ ಹೊಸ್ತಿಲಲ್ಲಿದ್ದು, ಮಾಜಿ ನಾಯಕರಾದ ಎಂಎಸ್ ಧೋನಿ, ರಾಹುಲ್ ದ್ರಾವಿಡ್ ನಿರ್ಮಾಣ ಮಾಡಿದ್ದ ದಾಖಲೆಯೊಂದನ್ನು ಕೊಹ್ಲಿ ಸರಿಗಟ್ಟಿದ್ದಾರೆ.

ಇಂದೋರ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದ ಗೆಲುವಿನ ಬಳಿಕ ಕೊಹ್ಲಿ ಈ ಸಾಧನೆ ಗೈದಿದ್ದು, ಈ ಪಂದ್ಯದ ಗೆಲುವಿನ ಮೂಲಕ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಸತತ 9 ಏಕದಿನ ಪಂದ್ಯಗಳನ್ನು ಗೆದ್ದಂತಾಗಿದೆ. ಈ  ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿದ್ದ ಭಾರತ ತಂಡ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಂಡಿತ್ತು. ಅಲ್ಲಿ ಶ್ರೀಲಂಕಾ ನೆಲದಲ್ಲೇ ಆ ತಂಡವನ್ನು 5-0  ಅಂತರದಲ್ಲಿ ಕೊಹ್ಲಿ ಪಡೆ ವೈಟ್ ವಾಶ್ ಮಾಡಿತ್ತು.

ಇದೀಗ ತವರಿನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಈಗಾಗಲೇ 3 ಪಂದ್ಯಗಳನ್ನು ಗೆದ್ದಿದೆ. ಆ ಮೂಲಕ ಕೊಹ್ಲಿ ಬಳಗ ಸತತ 9 ಏಕದಿನ ಪಂದ್ಯಗಳನ್ನು ಗೆದ್ದಿದೆ. ಈ ಹಿಂದೆ  ಭಾರತ ತಂಡ 2008ರ ನವೆಂಬರ್‌ನಿಂದ 2009ರ ಫೆಬ್ರವರಿಯ ನಡುವೆ ಸತತ 9 ಪಂದ್ಯಗಳನ್ನು ಜಯಿಸಿದ ಸಾಧನೆ ಮಾಡಿತ್ತು. ಇದೀಗ ಕೊಹ್ಲಿ 2008-09 ಹಾಗೂ 2006ರಲ್ಲಿ ಸತತ ಏಕದಿನ ಪಂದ್ಯಗಳನ್ನು ಜಯಿಸಿದ್ದ  ಎಂ.ಎಸ್. ಧೋನಿ ಹಾಗೂ ರಾಹುಲ್ ದ್ರಾವಿಡ್‌ ರ ನಾಯಕತ್ವದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಅಂತೆಯೇ ಭಾರತ ತಂಡ ಇಂದೋರ್ ನ ಹೋಳ್ಕರ್ ಸ್ಟೇಡಿಯಂನಲ್ಲಿ ಆಡಿರುವ ಎಲ್ಲ 5 ಪಂದ್ಯಗಳನ್ನು ಜಯಿಸಿದ ಸಾಧನೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ