ವಿರಾಟ್ ಕೊಹ್ಲಿ 
ಕ್ರಿಕೆಟ್

ಆಸಿಸ್ ವಿರುದ್ಧ 4ನೇ ಪಂದ್ಯ; ದಾಖಲೆಯತ್ತ ಟೀಂ ಇಂಡಿಯಾ ಚಿತ್ತ

ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ..

ಬೆಂಗಳೂರು: ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಗೆಲುವು ಸಾಧಿಸುವ ಮೂಲಕ ಮತ್ತೊಂದು ಏಕದಿನ ಸರಣಿಯನ್ನು ವೈಟ್ ವಾಶ್ ಮಾಡುವ ಉತ್ಸಾವದಲ್ಲಿದೆ.
ಸರಣಿ ವೈಟ್ ವಾಶ್ ಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ತಾಲಿಮು ನಡೆಸಿದ್ದು, ಗೆಲುವಿನ ಲಯ ಮುಂದುವರೆಸುವ ಸಾಧ್ಯತೆ ಇದೆ. ಆಸಿಸ್ ವಿರುದ್ಧದ ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಈಗ ನಾಲ್ಕನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿ ಈಗಾಗಲೇ ಭಾರತದ ಪಾಲಾಗಿದೆ. ಸರಣಿ ಕೈವಶ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ಪಡೆಯ ಮುಂದಿನ ಟಾರ್ಗೆಟ್ ಸರಣಿ ಕ್ಲೀನ್ ಸ್ವೀಪ್ ಮಾಡುವುದು. ಆದರೆ ಉದ್ಯಾನನಗರಿಯ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತದ ಗೆಲುವಿನ ಓಟಕ್ಕೆ ತಡೆ ಬೀಳುವ ಭೀತಿ ಎದುರಾಗಿದೆ. ಇಂಥ ಸವಾಲು ಎದುರಾಗಿರುವುದು ಸ್ಟೀವನ್ ಸ್ಮಿತ್ ಪಡೆಯಿಂದ ಅಲ್ಲ, ಮಳೆರಾಯ ಇಂಥದ್ದೊಂದು ಸಾಧ್ಯತೆಯನ್ನು ಹರಡಿದ್ದಾನೆ.
ಹವಾಮಾನ ಇಲಾಖೆ ವರದಿಯ ಪ್ರಕಾರ, ಗುರುವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ನಗರದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು 24ರಿಂದ 48 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel