ವೀರೇಂದ್ರ ಸೆಹ್ವಾಗ್ ಗೆ ಸಚಿನ್ ರಿಂದ ದುಬಾರಿ ಗಿಫ್ಟ್
ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರಿಗೆ ಅದ್ಧೂರಿ ಗಿಫ್ಟ್...
ನವದೆಹಲಿ: ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರಿಗೆ ಅದ್ಧೂರಿ ಗಿಫ್ಟ್ ನೀಡಿದ್ದಾರೆ.
ಸಚಿನ್ ತಮ್ಮ ಬಳಿಯಿದ್ದ ಬಿಎಂಡಬ್ಲ್ಯೂ ಸೆವೆನ್ ಸೀರೀಸ್ ಗೆ ಸೇರಿದ 1.14 ಕೋಟಿ ಮೌಲ್ಯದ ಬಿಎಂಡಬ್ಲ್ಯೂ 730 ಎಲ್ ಡಿ ಕಾರನ್ನು ಸೆಹ್ವಾಗ್ ಗೆ ಉಡುಗೊರೆಯಾಗಿ ನೀಡಿದ್ದಾರೆ.
ಸೆಹ್ವಾಗ್ ಸಚಿನ್ ನೀಡಿರುವ ಕಾರಿನೊಂದಿಗೆ ಫೋಟೋ ಕ್ಲಿಕ್ಕಿಸಿ ಟ್ವೀಟರ್ ಗೆ ಅಪ್ ಲೋಡ್ ಮಾಡಿದ್ದು ಸಚಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಇಬ್ಬರು ಕ್ರಿಕೆಟ್ ದಿಗ್ಗಜರು 2011ರ ವಿಶ್ವಕಪ್ ವಿಜೇತ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ದೀರ್ಘ ಕಾಲದಿಂದ ಉತ್ತಮ ಗೆಳೆಯರಾಗಿದ್ದು ಇದಗೀ ತಮ್ಮ ಆತ್ಮೀಯ ಗೆಳೆಯನಿಗೆ ಸಚಿನ್ ದುಬಾರಿ ಉಡುಗೊರೆಯೊಂದನ್ನು ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.