4ನೇ ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಲ್ಕನೇ ಪಂದ್ಯ ನಡೆಯುತ್ತಿದ್ದು ಆಸ್ಟ್ರೇಲಿಯಾ 5 ಓವರ್ ಮುಕ್ತಾಯಕ್ಕೆ 29 ರನ್ ಗಳಿಸಿದೆ. ಆಸ್ಟ್ರೇಲಿಯಾ ಪರ ಆ್ಯರನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ.
ಟೀಂ ಇಂಡಿಯಾ ಪರ ಅಜಿಂಕ್ಯಾ ರಹಾನೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ(ನಾಯಕ), ಮನೀಶ್ ಪಾಂಡ್ಯೆ, ಕೇದಾರ್ ಜಾದವ್, ಎಂಎಸ್ ಧೋನಿ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯಾ, ಯಜುವೇಂದರ್ ಚಹಾಲ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಅಕ್ಷರ್ ಪಟೇಲ್.