ದುಬೈ: ಆಸ್ಟ್ರೇಲಿಯಾ ವಿರುದ್ಧದ ಐದು ಏಕದಿನ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳಲ್ಲೂ ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ನಾಲ್ಕನೇ ಪಂದ್ಯದಲ್ಲಿ ಸೋಲು ಕಂಡಿದ್ದು ಇಂದು ನಡೆಯಲಿರುವ ಐದನೇ ಪಂದ್ಯದಲ್ಲಿ ಗೆದ್ದರೇ ಮಾತ್ರ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಲಿದೆ.
ಮೊದಲ ಮೂರು ಪಂದ್ಯಗಳನ್ನು ಗೆದ್ದಿದ್ದ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿತ್ತು. ನಂತರ ಬೆಂಗಳೂರಿನಲ್ಲಿ ನಾಲ್ಕನೇ ಪಂದ್ಯದಲ್ಲಿ ಭಾರತ 21 ರನ್ ಗಳಿಂದ ಸೋಲು ಕಂಡಿತ್ತು. ಇದರಿಂದಾಗಿ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದರೇ ನಂಬರ್ ಸ್ಥಾನಕ್ಕೇರಲಿದೆ.
ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ 119 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು ಭಾರತ ನಾಲ್ಕನೇ ಪಂದ್ಯ ಸೋಲಿನ ನಂತರ ರೇಟಿಂಗ್ ನಲ್ಲಿ ಕೊಂಚ ಇಳಿಕೆಯಾಗಿದ್ದು 118.93 ಅಂಕಗಳಿಂದ 2ನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನಲೆಯಲ್ಲಿ ಭಾರತ ಐದನೇ ಪಂದ್ಯವನ್ನು ಗೆದ್ದರಷ್ಟೇ ಅಗ್ರಸ್ಥಾನಕ್ಕೇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics