ಮುಂಬೈ: 2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದ್ದು ಟಾಸ್ ಸೋತ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಮಾಡುತ್ತಿದೆ.
ಮುಂಬೈನ ವಾಖೆಂಡೆ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಎರಡು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ಐಪಿಎಲ್ ಬಳಗವನ್ನು ಸೇರಿಕೊಂಡಿದೆ.
ಮುಂಬೈ ಇಂಡಿಯನ್ಸ್: ಇಶನ್ ಕಿಶನ್, ಎವಿನ್ ಲೂಯಿಸ್, ರೋಹಿತ್ ಶರ್ಮಾ(ಕ್ಯಾಪ್ಟನ್), ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜಸ್‌ಪ್ರೀತ್ ಬೂಮ್ರಾ, ಮುಸ್ತಫಿಜುರ್ ರೆಹಮಾನ್, ಮಿಚೆಲ್ ಮೆಕ್‌ಕ್ಲೆನಗನ್, ಮಯಾಂಕ್ ಮಾರ್ಕಂಡೆ
ಚೆನ್ನೈ ಸೂಪರ್ ಕಿಂಗ್ಸ್: ರಾಯುಡು, ಶೇನ್ ವಾಟ್ಸನ್, ಸುರೇಶ್ ರೈನಾ, ಕೇದಾರ್ ಜಾಧವ್, ಎಂಎಸ್ ಧೋನಿ(ಕ್ಯಾಪ್ಟನ್), ಬ್ರಾವೋ, ಆರ್.ಜಡೇಜಾ, ಹರ್ಭಜನ್ ಸಿಂಗ್, ದೀಪಕ್ ಚಹರ್, ಇಮ್ರಾನ್ ತಾಹೀರ್, ಮಾರ್ಕ್ ವುಡ್