ಮುಂಬೈ: ಡ್ವೇನ್ ಬ್ರಾವೋ ಬಿರುಸಿನ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಗಳಿಸಿತ್ತು. ಬ್ರಾವೋ ಆಟದ ಬಗ್ಗೆ ಸಿಎಸ್ ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬ್ರಾವೋ ಜವಾಬ್ದಾರಿ ತೆಗೆದುಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ.
ಸಿಎಸ್ ಕೆ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯವನ್ನು ಎಲ್ಲರೂ ಕುತೂಹಲದಿಂದ ವೀಕ್ಷಿಸುತ್ತಾರೆ. ಸಿಎಸ್ ಕೆ ತಂಡ ಎರಡು ವರ್ಷಗಳ ನಂತರ ಐಪಿಎಲ್ ಗೆ ವಾಪಸ್ಸಾಗಿದೆ, ಬ್ರಾವೋ ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ಆಡಿದ ಮಾಡಿದ ರೀತಿ ಅದ್ಭುತ, ಬ್ರಾವೋ ಜವಾಬ್ದಾರಿ ತೆಗೆದುಕೊಳ್ಳುತ್ತಿರುವುದು ಸಂತಸದ ವಿಷಯ ಎಂದು ಧೋನಿ ಹೇಳಿದ್ದಾರೆ.
ಒಟ್ಟಾರೆಯಾಗಿ ತಮ್ಮ ತಂಡ ಇನ್ನೂ ಉತ್ತಮವಾಗಿ ಆಡಬಹುದಿತ್ತು ಎಂದು ಧೋನಿ ಅಭಿಪ್ರಾಯಪಟ್ಟಿದ್ದಾರೆ.