ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ 
ಕ್ರಿಕೆಟ್

ಚೆನ್ನೈನಿಂದ ಐಪಿಎಲ್ ಕ್ರಿಕೆಟ್ ಮ್ಯಾಚ್ ಸ್ಥಳಾಂತರವಿಲ್ಲ; ರಾಜೀವ್ ಶುಕ್ಲಾ ಸ್ಪಷ್ಟನೆ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಮ್ಯಾಚ್ ಏ.10 ರಂದು ನಿಗದಿತ ಸಮಯ ಹಾಗೂ ಸ್ಥಳದಲ್ಲಿಯೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ...

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಮ್ಯಾಚ್ ಏ.10 ರಂದು ನಿಗದಿತ ಸಮಯ ಹಾಗೂ ಸ್ಥಳದಲ್ಲಿಯೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಾದ್ಯಂತ ಹಲವು ಪ್ರತಿಭಟನೆಗಳು ನಡೆಯುತ್ತಿದ್ದು, ಈ ಬಾರಿ ಚೆನ್ನ್ನೈನಲ್ಲಿ ನಡೆಯಲಿರುವ ಐಪಿಎಲ್ ಮ್ಯಾಚ್'ನ್ನು ಕೇರಳ ರಾಜ್ಯದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂಬ ಮಾತುಗಳು ಈ ಹಿಂದೆ ಕೇಳಿ ಬಂದಿದ್ದವು. 
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜೀವ್ ಶುಕ್ಲಾ ಅವರು, ಸಂಬಂಧಪಟ್ಟಂತಹ ಅಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಚೆನ್ನೈನಲ್ಲಿ ಐಪಿಎಲ್ ಕ್ರಿಕೆಟ್ ಮ್ಯಾಚ್ ನಡೆಯುವ ಸಂದರ್ಭದಲ್ಲಿ ಸೂಕ್ತ ರೀತಿಯ ಭದ್ರತೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆಂದು ಹೇಳಿದ್ದಾರೆ. 
ಚೆನ್ನೈನಲ್ಲಿ ನಡೆಯುವ ಐಪಿಎಲ್ ಮ್ಯಾಚ್ ಸ್ಥಳಾಂತರಗೊಂಡಿಲ್ಲ. ಏ.10 ರಂದು ಚೆನ್ನೈನಲ್ಲಿಯೇ ಮ್ಯಾಚ್ ನಡೆಯುತ್ತದೆ. ಬೆರೆಲ್ಲಿಯೂ ಸ್ಥಳಾಂತರ ಮಾಡುವ ಯೋಜನೆಗಳಿಲ್ಲ. ಪ್ರತಿಯೊಬ್ಬರಲ್ಲೂ ನಾನು ಮನವಿ ಮಾಡಿಕೊಳ್ಳುತ್ತೇನೆ ಐಪಿಎಲ್ ನಲ್ಲಿ ರಾಜಕೀಯ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video