ಮೊಹಾಲಿ ಮೈದಾನದಲ್ಲಿ ಧೋನಿ-ಯುವಿ 'ಬ್ರೊಮ್ಯಾನ್ಸ್' 
ಕ್ರಿಕೆಟ್

ಮೈದಾನದಲ್ಲೇ ಧೋನಿ-ಯುವಿ 'ಬ್ರೊಮ್ಯಾನ್ಸ್', ವಿಡಿಯೋ ವೈರಲ್!

ಮೊಹಾಲಿಯಲ್ಲಿ ನಡೆಯುತ್ತಿದ್ದ ಪಂದ್ಯದ ವೇಳೆ ಸೊಂಟದ ನೋವಿನಿಂದ ಬಳಲುತ್ತಿದ್ದ ಧೋನಿ ಅವರನ್ನು ಯುವಿ ಪ್ರೋತ್ಸಾಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೊಹಾಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ನಡುವಿನ ಸ್ನೇಹಕ್ಕೆ ಮತ್ತೊಂದು ಸಾಕ್ಷಿ ದೊರೆತಿದ್ದು, ಮೊಹಾಲಿಯಲ್ಲಿ ನಡೆಯುತ್ತಿದ್ದ ಪಂದ್ಯದ ವೇಳೆ ಸೊಂಟದ ನೋವಿನಿಂದ ಬಳಲುತ್ತಿದ್ದ ಧೋನಿ ಅವರನ್ನು ಯುವಿ ಪ್ರೋತ್ಸಾಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ನಿನ್ನೆ ಮೊಹಾಲಿಯಲ್ಲಿ ನಡೆದ ಕಿಂಗ್ಸ್ ಇಲೆವನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಂದ್ಯದ ನಡುವೆ ಧೋನಿ ಸೊಂಟದ ನೋವಿಗೆ ತುತ್ತಾಗಿದ್ದರು. ಈ ವೇಳೆ ಧೋನಿ ಬಳಿ ಬಂದ ಯುವಿ ನಿನಗೇನೂ ಆಗಿಲ್ಲ. ಏಳು ಮೇಲೆ ಎಂಬರ್ಥದಲ್ಲಿ ತಲೆ ಹಿಡಿದು ಬಗ್ಗಿಸಿದರು. ಈ ವೇಳೆ ಧೋನಿ ಕೂಡ ನಗುತ್ತಲೇ ಮೇಲೆದ್ದರು. 
ಇನ್ನು ನಿನ್ನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ತೀವ್ರ ಸೊಂಟದ ನೋವಿನ ನಡುವೆಯೇ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡವನ್ನು ಸೋಲಿನಿಂದ ಪಾರು ಮಾಡಲು ಪ್ರಯತ್ನಿಸಿದರು. ಅಂತಿಮ ಎಸೆತದವರೆಗೂ ಧೋನಿ ಕ್ರೀಸ್ ನಲ್ಲಿದ್ದರಾದರೂ ತಂಡಕ್ಕೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಧೋನಿ ಕೇವಲ 44 ಎಸೆತಗಳಲ್ಲಿ ಅಜೇಯ 79  ರನ್ ಸಿಡಿಸಿದ್ದರು. ಆದರೆ ಆ ಪಂದ್ಯವನ್ನು ಚೆನ್ನೈ ತಂಡ ಕೇವಲ 4 ರನ್ ಗಳ ಅಂತರದಲ್ಲಿ ವಿರೋಚಿತವಾಗಿ ಸೋತಿತು.
ಪಂದ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಧೋನಿ, ಬೆನ್ನು ನೋವು ತೀವ್ರತರವಾಗಿತ್ತು ನಿಜ. ಆದರೆ ಆ ದೇವರು ನನಗೆ ಅದನ್ನು ತಡೆದುಕೊಳ್ಳುವ ಶಕ್ತಿ ನೀಡಿದ್ದ. ಬೆನ್ನು ನೋವಿದ್ದರೆ ಏನು ಕೈಯಲ್ಲಿ ಶಕ್ತಿ ಇತ್ತಲ್ಲ ಎಂದು ತಮ್ಮ ಅದ್ಬುತ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಧೋನಿ ಸಂತಸದ ಮಾತನಾಡಿದ್ದಾರೆ. ಅಂತೆಯೇ ಬೆನ್ನು ನೋವಿನ ಕುರಿತು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅದೇನು ಅಂತಹ ಗಂಭೀರ ನೋವೇನೂ ಅಲ್ಲ. ನೀವು ನಿಮ್ಮ ನೋವನ್ನು ಗಂಭೀರವಾಗಿ ಪರಿಗಣಿಸಿದರೆ ಅದು ಇನ್ನೂ ದೊಡ್ಡದಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT