ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಆರ್ ಟಿಐ ವ್ಯಾಪ್ತಿಗೆ ಬಿಸಿಸಿಐ: ಕಾನೂನು ಆಯೋಗ ಶಿಫಾರಸು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯಿದೆ(ಆರ್‌ಟಿಐ) ವ್ಯಾಪ್ತಿಗೆ ತರಬೇಕು ಎಂದು...

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯಿದೆ(ಆರ್‌ಟಿಐ) ವ್ಯಾಪ್ತಿಗೆ  ತರಬೇಕು ಎಂದು ಕಾನೂನು ಆಯೋಗ ಬುಧವಾರ ಶಿಫಾರಸು ಮಾಡಿದೆ.
ಕ್ರಿಕೆಟ್ ಆಟವನ್ನು ನಿಯಂತ್ರಿಸುತ್ತಿರುವ ಬಿಸಿಸಿಐ ಪಾತ್ರ ಪಾರದರ್ಶಕವಾಗಿರಬೇಕಾದರರೆ ಅದು ಸಾರ್ವಜನಿಕ ಪರಿಶೀಲನೆಗೆ ಒಳಪಡಬೇಕು. ಇಲ್ಲದಿದ್ದರೆ ಅಪಾರದರ್ಶಕತೆ ಮತ್ತು ಅಕೌಂಟೆಬಿಲಿಟಿ ಇಲ್ಲದ ವಾತಾವರಣಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಕಾನೂನು ಆಯೋಗ ತನ್ನ ವರದಿಯಲ್ಲಿ ತಿಳಿಸಿದೆ. 
ಕಾನೂನು ಆಯೋಗ ಇಂದು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ವರದಿ ಸಲ್ಲಿಸಿದ್ದು, ಬಿಸಿಸಿಐ ಅನ್ನು ಸಂವಿಧಾನದ ಆರ್ಟಿಕಲ್ 12 ಅಡಿ ಸ್ಟೇಟ್ ಎಂದು ವರ್ಗೀಕರಿಸಲು ಅರ್ಹವಾಗಿದೆ ಎಂದು ಹೇಳಿದೆ.
2016ರಲ್ಲಿ ಸುಪ್ರೀಂ ಕೋರ್ಟ್, ಬಿಸಿಸಿಐ ಅನ್ನು ಆರ್ ಟಿಐ ಅಡಿ ತರಬೇಕೇ ಅಥವಾ ಬೇಡ ಎಂಬ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಕಾನೂನು ಆಯೋಗಕ್ಕೆ ಸೂಚಿಸಿತ್ತು.
ಒಂದು ವೇಳೆ ಕೇಂದ್ರ ಸರ್ಕಾರ ಕಾನೂನು ಆಯೋಗ ಶಿಫಾರಸನ್ನು ಒಪ್ಪಿದರೆ ಬಿಸಿಸಿಐ ಸಾರ್ವಜನಿಕ ಸಂಸ್ಥೆಯಾಗಿ, ಆರ್ ಟಿಐ ಕಾಯ್ದೆ ಅಡಿ ಬರಲಿದೆ. ಹಾದ ದೇಶ, ರಾಜ್ಯ ಹಾಗೂ ವಲಯ ತಂಡಗಳನ್ನು ಪ್ರತಿನಿಧಿಸುವ ಆಟಗಾರರ ಆಯ್ಕೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಬಹುದು. ಅಲ್ಲದೆ ಬಿಸಿಸಿಐ ನಡೆಸುವ ರಹಸ್ಯ ಸಭೆಗಳಾಗಲೀ, ರಾಜಕೀಯ ವ್ಯಕ್ತಿಗಳನ್ನು ಪದಾಕಾರಿಗಳನ್ನಾಗಿ ಆರಿಸುವುದಾಗಲೀ, ನಿರ್ದಿಷ್ಟ ವ್ಯಕ್ತಿ ಇಲ್ಲವೇ ಸಂಸ್ಥೆ ಜತೆಗಿನ ಒಪ್ಪಂದವಾಗಲೀ ಹಾಗೂ ಆಟಗಾರರ ಆಯ್ಕೆ ಇತ್ಯಾದಿ ವಿಷಯಗಳು ಸಾರ್ವಜನಿಕವಾಗಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ