ಕೊಹ್ಲಿ ಬ್ಯಾಟಿಂಗ್ ವೈಖರಿ 
ಕ್ರಿಕೆಟ್

ಸೋಲಿನ ಸರಪಳಿ ಕಳಚಿಕೊಂಡ ಮುಂಬೈ, ಆರ್ ಸಿಬಿ ವಿರುದ್ಧ 46 ರನ್ ಭರ್ಜರಿ ಜಯ

ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ಮುಂಬೈ ಇಂಡಿಯನ್ಸ್ ತಂಡ 46 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ಮುಂಬೈ ಇಂಡಿಯನ್ಸ್ ತಂಡ 46 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಮುಂಬೈ ನೀಡಿದ್ದ 214 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದೆ ಬೆಂಗಳೂರು ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಇಂದು ಪ್ರಮುಖವಾಗಿ ಆರ್ ಸಿಬಿಗೆ ತನ್ನ ಪ್ರಬಲ ಬ್ಯಾಟಿಂಗ್ ಗೇ ಮುಳುವಾಯಿತು ಎನ್ನಬಹುದು. ಏಕೆಂದರೆ ದೈತ್ಯ ಬ್ಯಾಟ್ಸಮನ್ ಗಳ ಹೊರತಾಗಿಯಾ ನಾಯಕ ವಿರಾಟ್ ಕೊಹ್ಲಿ ಹೊರತು ಪಡಿಸಿ ಆರ್ ಸಿಬಿಯ ಯಾವೊಬ್ಬ ಬ್ಯಾಟ್ಸಮನ್ ಕೂಡ ಗಟ್ಟಿಯಾಗಿ ಕ್ರೀಸ್ ನಲ್ಲಿ ನಿಂತು ಆಡುವ ಪ್ರಯತ್ನ ಮಾಡಲೇ ಇಲ್ಲ. ಆರಂಭಿಕರಾಗಿ ಕ್ರೀಸ್ ಗೆ ಆಗಮಿಸಿದ ಕೊಹ್ಲಿ ಇನ್ನಿಂಗ್ಸ್ ಕೊನೆಯ ಎಸೆತದವರೆಗೂ ಕ್ರೀಸ್ ನಲ್ಲಿ ಅಜೇಯರಾಗಿ ಉಳಿದಿದ್ದರು.
ಆದರೆ ಕೊಹ್ಲಿಗೆ ತಂಡದ ಇತರೆ ಯಾವೊಬ್ಬ ಆಟಗಾರ ಕೂಡ ಸಾಥ್ ನೀಡಲಿಲ್ಲ. ಕ್ವಿಂಟನ್ ಡಿ ಕಾಕ್ (19 ರನ್), ಮನ್ ದೀಪ್ ಸಿಂಗ್ (16 ರನ್) ಮತ್ತು ಕ್ರಿಸ್ ವೋಕ್ಸ್ (11) ಎರಡಂಕಿ ದಾಟಿದ್ದು, ಬಿಟ್ಟರೆ ತಂಡದ ಮತ್ತಾವ ಆಟಗಾರನೂ ಎರಡಂಕಿ ದಾಟಲಿಲ್ಲ. ಏಕಾಂಗಿ ಹೋರಾಟ ನಡೆಸಿದ ಕೊಹ್ಲಿ ಅಜೇಯ 92 ರನ್ ಗಳಿಸಿದರು. ಅವರ ಅದ್ಬುತ ಇನ್ನಿಂಗ್ಸ್ ನಲ್ಲಿ 7 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ಗಳು ಸೇರಿದ್ದವು. ಅಂತಿಮವಾಗಿ ಆರ್ ಸಿಬಿ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಗಳನ್ನು ಮಾತ್ರ ಗಳಿಸಿತು.
ಇನ್ನು ಮುಂಬೈ ಪರ ಕೃಣಾಲ್ ಪಾಂಡ್ಯಾ 3 ವಿಕೆಟ್ ಪಡೆದರೆ, ಬುಮ್ರಾ ಮತ್ತು ಮೆಕ್ ಲೀನಿಘನ್ ತಲಾ 2 ವಿಕೆಟ್ ಪಡೆದರು. ಮಯಾಂಕ್ ಮಾರ್ಕಂಡೆ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ