ಗೌತಮ್ ಗಂಭೀರ್-ಶ್ರೇಯಸ್ ಅಯ್ಯರ್ 
ಕ್ರಿಕೆಟ್

ಐಪಿಎಲ್ 2018: ಡೆಲ್ಲಿ ಡೇರ್‏ಡೆವಿಲ್ಸ್ ಕಳಪೆ ಪ್ರದರ್ಶನ; ನಾಯಕತ್ವ ತ್ಯಜಿಸಿದ ಗಂಭೀರ್, ಶ್ರೇಯಸ್‌‌‌ಗೆ ಪಟ್ಟ

ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಬೇಸತ್ತು ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದಾರೆ...

ನವದೆಹಲಿ: ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಬೇಸತ್ತು ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದಾರೆ. 
ಗಂಭೀರ್ ನಾಯಕತ್ವದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಆರು ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನು ರನ್ ರೇಟ್ ನಲ್ಲೂ ತಂಡ ಹೇಳಿಕೊಳ್ಳುವಂತಾ ಸಾಧನೆ ಮಾಡಿಲ್ಲ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಗೌತಮ್ ಗಂಭೀರ್ ನಾಯಕತ್ವದಿಂದ ಕೆಳಗಿಳಿದಿದ್ದು ಯುವ ಆಟಗಾರ ಶ್ರೇಯಸ್ ಅಯ್ಯರ್ ನಾಯಕ್ವತ ವಹಿಸಲಿದ್ದಾರೆ. 
ಮತ್ತೊಂದೆಡೆ ಗೌತಮ್ ಗಂಭೀರ್ ಸಹ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆರು ಪಂದ್ಯಗಳ ಪೈಕಿ ಗೌತಮ್ ಕೇವಲ 85 ರನ್ ಗಳನ್ನು ಮಾತ್ರ ಸಿಡಿಸಿದ್ದಾರೆ.  ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 55 ರನ್ ಸಿಡಿಸಿದ್ದು ಬಿಟ್ಟರೆ ಇನ್ಯಾವ ಪಂದ್ಯದಲ್ಲೂ 20 ರನ್ ಗಳ ಗಡಿ ದಾಟಿಲ್ಲ. 
ಗೌತಮ್ ಗಂಭೀರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎರಡು ಬಾರಿ ಚಾಂಪಿಯನ್ ತಂಡವನ್ನಾಗಿದ್ದರು. ಆದರೆ ಈ ಬಾರಿಯ ಐಪಿಎಲ್ ನಲ್ಲಿ ತಂಡವನ್ನು ಉತ್ತಮವಾಗಿ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!