ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಸಿಸಿ ಸಭೆ: 2028ರ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆ ಸಾಧ್ಯತೆ

ಲಾಸ್ ಎಂಜಲೀಸ್ ನಲ್ಲಿ ನಡೆಯುವ 2028ರ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಲಿದೆ ಎಂದು ಅಂತರಾಷ್ಟ್ರೀಯ...

ಸಾಂದರ್ಭಿಕ ಚಿತ್ರ
Lingaraj Badiger
Updated On : 26 Apr 2018, 11:01 am
ಕೋಲ್ಕತಾ: ಲಾಸ್ ಎಂಜಲೀಸ್ ನಲ್ಲಿ ನಡೆಯುವ 2028ರ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಲಿದೆ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ)ಯ ಮುಖ್ಯ ಕಾರ್ಯನಿರ್ವಾಹಕ ಡೇವಿಡ್ ರಿಚರ್ಡ್ ಸನ್ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೋಲ್ಕತಾದಲ್ಲಿ ಒಂದು ವಾರದಿಂದ ನಡೆದ ಐಸಿಸಿ ಸಭೆಯ ಕೊನೆಯ ದಿನ ಸುದ್ದಿಗಾರರೊಂದಿಗೆ ಮಾತನಾಡಿದ ರಿಚರ್ಡ್ ಸನ್ ಅವರು,  ವಿಶ್ವದ ಕ್ರಿಕೆಟ್ ಆಡುವ ಎಲ್ಲ ದೇಶಗಳು ಒಂದಾದರೆ 2028ರ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ಮಿಂಚಲಿದೆ ಎಂದರು.
ಪ್ಯಾರಿಸ್ ನಲ್ಲಿ ನಡೆಯುವ 2024ರ ಒಲಂಪಿಕ್ಸ್ ಗೆ ಕ್ರಿಕೆಟ್ ಸೇರಿಸುವಂತೆ ಅಂತರಾಷ್ಟ್ರೀಯ ಒಲಂಪಿಕ್ ಸಮಿತಿ(ಐಒಸಿ)ಗೆ ಅಧಿಕೃತವಾಗಿ ಮನವಿ ಸಲ್ಲಿಸಲು ಐಸಿಸಿ ಈಗಾಗಲೇ ವಿಳಂಬ ಮಾಡಿದೆ. ಆದರೂ ಈ ಸಂಬಂಧ ಐಸಿಸಿ, ಐಒಸಿ ಜೊತೆ ಮಾತುಕತೆ ಮುಂದುವರೆಸಲಿದೆ ಎಂದು ಅವರು ತಿಳಿಸಿದ್ದಾರೆ.

Advertisement

Advertisement

ಕ್ರಿಕೆಟ್ ಸಹ ಒಂದು ಕ್ರೀಡೆಯಾಗಿದ್ದು, ಇದನ್ನು ಆಡುವ ಎಲ್ಲಾ ದೇಶಗಳು ಒಗ್ಗಟ್ಟಿನಿಂದ ಒಲಂಪಿಕ್ಸ್ ಗೆ ಸೇರಿಸಬೇಕು ಎಂದು ಮನವಿ ಮಾಡಿದರೆ, ಒಲಂಪಿಕ್ ಮೌಲ್ಯ ಮತ್ತಷ್ಟು ಹೆಚ್ಚಲಿದೆ ಎಂದರು.
ಒಲಿಂಪಿಕ್ಸ್ ನಲ್ಲಿ ಟಿ20 ಕ್ರಿಕೆಟ್ ಆಡಿಸಬೇಕು ಎನ್ನುವುದು ಐಸಿಸಿಯ ಮಹತ್ವಾಕಾಂಕ್ಷೆಯಾಗಿದೆ. ಆದರೆ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರಿಸಲು ವಿಶ್ವದ ಕ್ರಿಕೆಟ್ ಆಡುವ ಎಲ್ಲ ದೇಶಗಳ ಬೆಂಬಲ ಅತ್ಯಗತ್ಯವಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement