ಕೊಹ್ಲಿ 
ಕ್ರಿಕೆಟ್

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಅಫ್ಘಾನ್ ಟೆಸ್ಟ್: ಇಕ್ಕಟ್ಟಿನಲ್ಲಿ ಸಿಲುಕಿದ ನಾಯಕ ಕೊಹ್ಲಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ಸಧ್ಯಕ್ಕೆ ಐಪಿಎಲ್ ನಲ್ಲಿ ಕಾರ್ಯನಿರತರಾಗಿದ್ದು,ಸರಣಿ ಕ್ರಿಕೆಟ್ ಟೂರ್ನಿಗಳ ನಡುವೆ ಆಯ್ಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ಸಧ್ಯಕ್ಕೆ ಐಪಿಎಲ್ ನಲ್ಲಿ ಕಾರ್ಯನಿರತರಾಗಿದ್ದು,ಸರಣಿ ಕ್ರಿಕೆಟ್ ಟೂರ್ನಿಗಳ ನಡುವೆ ಆಯ್ಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. 
ಜೂ.14 ರಿಂದ ಆಫ್ಘಾನಿಸ್ತಾನ- ಭಾರತದ ನಡುವೆ ಟೆಸ್ಟ್ ಪಂದ್ಯಗಳು ಪ್ರಾರಂಭವಾಗಲಿದ್ದು, ಈ ನಡುವೆಯೇ ಎದುರಾಗಲಿರುವ ಇಂಗ್ಲೆಂಡ್ ನ ಕೌಂಟಿ ಕ್ರಿಕೆಟ್ ಹಾಗೂ ಅಫ್ಘಾನ್ ಟೆಸ್ಟ್ ನಡುವೆ ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕೌಂಟಿ ಕ್ರಿಕೆಟ್ ನಲ್ಲಿ ಆಡಿದರೆ ಭಾರತ-ಇಂಗ್ಲೆಂಡ್ ನಡುವಿನ ಸರಣಿಗೆ ಪಿಚ್ ನ್ನು ಸರಿಯಾಗಿ ಅರ್ಥ ಮಾಡಿಕೊಂಡು ತಂತ್ರಗಾರಿಕೆ ರೂಪಿಸುವುದಕ್ಕೆ ಕೌಂಟಿ ಕ್ರಿಕೆಟ್ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಕೌಂಟಿ ಕ್ರಿಕೆಟ್ ಆಯ್ಕೆ ಮಾಡುವುದೋ ಅಥವಾ ಅದೇ ಸಮಯದಲ್ಲಿ ಎದುರಾಗುವ ಅಫ್ಘಾನ್ ಟೆಸ್ಟ್ ನಲ್ಲಿ ಭಾಗಿಯಾವುದೋ ಎಂಬುದನ್ನು ಕೊಹ್ಲಿ ನಿರ್ಧರಿಸಬೇಕಿದೆ. 
ಸುಪ್ರೀಂ ಕೋರ್ಟ್ ನೇಮಿಸಿರುವ (ಸಿಒಎ) ಸಹ ಅಫ್ಘಾನ್ ಹಾಗೂ ಕೌಂಟಿ ಕ್ರಿಕೆಟ್ ನ ನಡುವೆ ಆಯ್ಕೆ ಮಾಡಿಕೊಳ್ಳುವ ನಿರ್ಣಯವನ್ನು ಕೊಹ್ಲಿಗೇ ಬಿಡಲು ನಿರ್ಧರಿಸಿದೆ. ಆದರೆ ಒಂದು ವೇಳೆ ಕೌಂಟಿ ಕ್ರಿಕೆಟ್ ನಲ್ಲಿ ಆಡಿ ಅಫ್ಘಾನ್ ಟೆಸ್ಟ್ ನಲ್ಲಿ ಕೊಹ್ಲಿ ಅನುಪಸ್ಥಿತಿ ಕಾಡಿದರೆ ಅದು ಕೆಟ್ಟ ಸಂಪ್ರದಾಯಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬ ಆತಂಕವೂ ಇದೆ. 
ಒಂದು ವೇಳೆ ಕೌಂಟಿ ಕ್ರಿಕೆಟ್ ನಲ್ಲಿ ಆಡಿದರೂ ಅಫ್ಘಾನ್ ವಿರುದ್ಧದ ಟೆಸ್ಟ್ ಸರಣಿಯ ಒಂದು ಪಂದ್ಯದಲ್ಲಿ ಆಡಬಹುದು, ಆದರೆ ಅದು ಕೆಟ್ಟ ಸಂಪ್ರದಾಯಕ್ಕೆ ದಾರಿ ಮಾದಿಕೊಟ್ಟಂತಾಗುತ್ತದೆ, ಅಷ್ಟೇ ಅಲ್ಲದೇ ಕೌಂಟಿ ಕ್ರಿಕೆಟ್ ನಲ್ಲಿ ಆಡುವುದೇ ಆದರೆ ಐಪಿಎಲ್ ನಲ್ಲಿ ಆಡದೇ ಇರುವುದಕ್ಕೂ ಅನುಮತಿ ಪಡೆಯಬೇಕು ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ. ಆದರೆ ಈ ಎಲ್ಲಾ ಅಂಶಗಳೂ ಊಹಾಪೋಹವಾಗಿದ್ದು, ಇನ್ನಷ್ಟೇ ಅಧಿಕೃತ ನಿರ್ಧಾರ ಪ್ರಕಟವಾಗಬೇಕಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

SCROLL FOR NEXT