ಶ್ರೇಯಸ್ ಅಯ್ಯರ್ - ವಿಜಯ್ ಶಂಕರ್ 
ಕ್ರಿಕೆಟ್

ಐಪಿಎಲ್: ಶ್ರೇಯಸ್, ಪೃಥ್ವಿ ಅಬ್ಬರದಾಟ, ಕೆಕೆಆರ್ ವಿರುದ್ಧ ಡಿಡಿಗೆ ಭರ್ಜರಿ ಜಯ

ಶ್ರೇಯಸ್ ಅಯ್ಯರ್(ಅಜಯ 93) ಹಾಗೂ ಪೃಥ್ವಿ ಶಾ(62) ಅವರ ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ ಡೆಲ್ಲಿ ಡೇರ್ ಡೆವಿಲ್ಸ್...

ನವದೆಹಲಿ: ಶ್ರೇಯಸ್ ಅಯ್ಯರ್(ಅಜಯ 93) ಹಾಗೂ ಪೃಥ್ವಿ ಶಾ(62) ಅವರ ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 55 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಂದು ಫಿರೋಜ್‌ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಡೆಲ್ಲಿ ಡೇರ್​ ಡೆವಿಲ್ಸ್​ ತಂಡ, ನಾಯಕ ಶ್ರೇಯಸ್​​ ಅಯ್ಯರ್ ಅವರ ಅಬ್ಬರದಾಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 219 ರನ್ ಗಳ ಬೃಹತ್ ಮೊತ್ತ ಸೇರಿಸಿತು.
ಗೆಲುವಿಗೆ 220 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 164 ರನ್​ ಗಳಿಸುವ ಮೂಲಕ ಡಿಡಿ ವಿರುದ್ಧ ಮುಖಭಂಗ ಅನುಭವಿಸಿತು.
ಕೆಕೆಆರ್ ಪರ ಪಿಯೂಷ್​ ಚಾವ್ಲ, ಶಿವಮ್​ ಮವಿ ಹಾಗೂ ಆಂಡ್ರೆ ರೆಸೆಲ್​ ತಲಾ ಒಂದೊಂದು ವಿಕೆಟ್​ ಪಡೆದರು. ಉಳಿದಂತೆ ಮ್ಯಾಕ್ಸ್​ವೆಲ್​ ರನೌಟ್​ ಆದರು.
ಡಿಡಿ ಪರ ಟ್ರೆಂಟ್​ ಬೋಲ್ಟ್​, ಗ್ಲೇನ್​ ಮ್ಯಾಕ್ಸ್​ವೆಲ್​, ಅವೇಶ್​ ಖಾನ್​ ಹಾಗೂ ಅಮಿತ್​ ಮಿಶ್ರಾ ತಲಾ ಎರಡು ವಿಕೆಟ್​ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT