ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಪಿಎಲ್ 2018: ರಾಜಸ್ತಾನ ರಾಯಲ್ಸ್ ವಿರುದ್ಧ ಗೆದ್ದು ಹ್ಯಾಟ್ರಿಕ್ ಹೊಡೆದ ಸನ್‌ರೈಸರ್ಸ್‌ ಹೈದರಾಬಾದ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಹೈದರಬಾದ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

ಸನ್‌ರೈಸರ್ಸ್‌ ಹೈದರಾಬಾದ್
Vishwanath S
Updated On : 29 Apr 2018, 8:10 am
ಜೈಪುರ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಹೈದರಬಾದ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. 
ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್‌ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 151 ರನ್ ಪೇರಿಸಿತು. 
ಹೈದರಾಬಾದ್ ನೀಡಿದ 152 ರನ್ ಗಳ ಗುರಿ ಪಡೆದ ರಾಜಸ್ತಾನ ರಾಯಲ್ಸ್ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 140 ರನ್ ಬಾರಿಸಿ 11 ರನ್ ಗಳಿಂದ ಸೋಲು ಅನುಭವಿಸಿತು. 

Advertisement

Advertisement

ಸನ್‌ರೈಸರ್ಸ್‌ ಹೈದರಾಬಾದ್ ಪರ ಹಾಲೇಸ್ 45, ಕೇನ್ ವಿಲಿಯಮ್ಸನ್ 63 ಮತ್ತು ಮನೀಷ್ ಪಾಂಡೆ 16 ರನ್ ಗಳಿಸಿದ್ದಾರೆ. ರಾಜಸ್ತಾನ ಪರ ಬೌಲಿಂಗ್ ನಲ್ಲಿ ಆರ್ಚೆರ್ 3 ಮತ್ತು ಗೌತಮ್ 2 ವಿಕೆಟ್ ಪಡೆದಿದ್ದಾರೆ. 
ರಾಜಸ್ತಾನ ರಾಯಲ್ಸ್ ಪರ ಅಜಿಂಕ್ಯ ರಹಾನೆ 65 ಮತ್ತು ಸಂಜು ಸ್ಯಾಮ್ಸನ್ 40 ರನ್ ಬಾರಿಸಿದ್ದಾರೆ. ಹೈದರಾಬಾದ್ ಪರ ಬೌಲಿಂಗ್ ನಲ್ಲಿ ಕೌಲ್ 2 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments