ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 175 ರನ್ ಬಾರಿಸಿದೆ.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿದ್ದು ಕೋಲ್ಕತ್ತಾಗೆ ಗೆಲ್ಲಲು 176 ರನ್ ಗಳ ಗುರಿ ನೀಡಿದೆ.
ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 29, ಬ್ರೆಂಡಮ್ ಮೆಕಲಮ್ 38 ವಿರಾಟ್ ಕೊಹ್ಲಿ ಭರ್ಜರಿ ಅರ್ಧ ಶತಕ 68 ರನ್ ಬಾರಿಸಿದ್ದಾರೆ.
ಕೋಲ್ಕತ್ತಾ ಪರ ಆಂಡ್ಯೂ ರಸೇಲ್ 3 ಮತ್ತು ಕುಲದೀಪ್ ಯಾದವ್ 1 ವಿಕೆಟ್ ಪಡೆದಿದ್ದಾರೆ.