ಚೆನ್ನೈ ಸೂಪರ್ ಕಿಂಗ್ಸ್ 
ಕ್ರಿಕೆಟ್

ಐಪಿಎಲ್ 2018: ಚೆನ್ನೈ ವಿರುದ್ಧ 13 ರನ್‌ಗಳಿಂದ ಸೋತ ಡೆಲ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ತಂಡ 13 ರನ್ ಗಳಿಂದ ಸೋಲು ಕಂಡಿದೆ...

ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ತಂಡ 13 ರನ್ ಗಳಿಂದ ಸೋಲು ಕಂಡಿದೆ. 
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ವಾಟ್ಸನ್ ಹಾಗೂ ಎಂಎಸ್ ಧೋನಿಯ ಅರ್ಧ ಶತಕದ ನೆರವಿನಿಂದ 211 ರನ್ ಗಳನ್ನು ಪೇರಿಸಿತು. 
ಚೆನ್ನೈ ನೀಡಿದ 212 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು 13 ರನ್ ಗಳಿಂದ ಚೆನ್ನೈಗೆ ಶರಣಾಗಿದೆ. 
ಚೆನ್ನೈ ಪರ ವಾಟ್ಸನ್ 78, ಡುಪ್ಲೇಸಿಸ್ 33, ಅಂಬಟ್ಟಿ ರಾಯುಡು 41 ಮತ್ತು ಎಂಎಸ್ ಧೋನಿ ಅಜೇಯ 51 ರನ್ ಸಿಡಿಸಿದ್ದಾರೆ. 
ಡೆಲ್ಲಿ ಪರ ರಿಷಬ್ ಪಂತ್ 79, ಮನ್ರೋ 26 ವಿಜಯ್ ಶಂಕರ್ 54 ರನ್ ಗಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ