ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಇಂಗ್ಲೆಂಡ್ ನಿಂದ ಬ್ಯಾಟಿಂಗ್ ಆಯ್ಕೆ
ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದಿದ್ದು ಬ್ಯಾಟಿಂಗ್ ನ್ನು ಆಯ್ಕೆ ಮಾಡಿಕೊಂಡಿದೆ.
ಲಂಡನ್: ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದಿದ್ದು ಬ್ಯಾಟಿಂಗ್ ನ್ನು ಆಯ್ಕೆ ಮಾಡಿಕೊಂಡಿದೆ.
ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ ಪ್ರಾರಂಭವಾಗಿದ್ದು, ಶುಭಾರಂಭ ಮಾಡಲು ಭಾರತ ಉತ್ಸುಕವಾಗಿ ಕಾಯುತ್ತಿದೆ. 2007 ರಿಂದ ಈ ವರೆಗೂ ಇಂಗ್ಲೆಂಡ್ ನಲ್ಲಿ ಒಂದೇ ಒಂದೂ ಟೆಸ್ಟ್ ಸರಣಿಯನ್ನೂ ಗೆಲ್ಲದ ಭಾರತಕ್ಕೆ ಇದು ಪ್ರತಿಷ್ಠೆಯ ಪಂದ್ಯವಾಗಿದ್ದು, ರಾಹುಲ್ ದ್ರಾವಿಡ್ ನಂತರ ಕೊಹ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ತವಕದಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಭಾರತ ಎಡವಿದ್ದು ಕೊಹ್ಲಿ ತಂಡ ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.