ಬರ್ಮಿಂಗ್ ಹ್ಯಾಮ್: ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಖ್ಯಾತ ಬ್ಯಾಟ್ಸ್‌ಮನ್‌ಗಳ ಕಳಪೆ ಬ್ಯಾಟಿಂಗ್‌ನಿಂದಾಗಿ ತಂಡ ಸೋಲು ಕಾಣಲು ಕಾರಣ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಪಂದ್ಯದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಐತಿಹಾಸಿಕ ಪಂದ್ಯದಲ್ಲಿ ಭಾಗಿಯಾಗಿರುವ ಹೆಮ್ಮೆ ಇದೆ. ಆದರೆ ಕೆಲವೊಂದು ಕಳಪೆ ಹೊಡೆತಗಳು ಹಾಗೂ ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸಿದ್ದೇ ತಂಡದ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ 149 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ಇನ್ನು 194 ರನ್ ಗಳ ಅಲ್ಪ ಮೊತ್ತದ ಗುರಿ ಇದ್ದರು. ಯಾವುದೇ ಆಟಗಾರನು ಸಹ ಉತ್ತಮ ರನ್ ಗಳಿಕೆ ಮಾಡಲಿಲ್ಲ. ಇಂತಹ ಸಮಯದಲ್ಲೂ ಕೊಹ್ಲಿ 51 ರನ್ ಪೇರಿಸಿ ಗೆಲುವಿನ ದಡ ಸೇರಿಸಲು ಹೆಚ್ಚು ಶ್ರಮಿಸಿದ್ದರು.
ಆದರೆ ತಂಡ ಇಂಗ್ಲೆಂಡ್ ವಿರುದ್ಧ 31 ರನ್ ಗಳಿಂದ ವಿರೋಚಿತ ಸೋಲು ಕಂಡಿತ್ತು. ಇನ್ನು ತಂಡದಲ್ಲಿ ಬೌಲರ್ ಗಳೇ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics