ಬೆನ್ ಸ್ಟೋಕ್ಸ್ 
ಕ್ರಿಕೆಟ್

ಟೀಂ ಇಂಡಿಯಾಗೆ ಸ್ಟ್ರೋಕ್ ಕೊಟ್ಟಿದ್ದ ಸ್ಟೋಕ್ಸ್ ಲಾರ್ಡ್ಸ್ ಟೆಸ್ಟ್ ನಿಂದ ಔಟ್!

ಪ್ರವಾಸಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಂಗ್ಲೆಂಡ್ ತಂಡದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಎರಡನೇ...

ಬರ್ಮಿಂಗ್ ಹ್ಯಾಮ್: ಪ್ರವಾಸಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಂಗ್ಲೆಂಡ್ ತಂಡದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. 
ಅರ್ಧ ಶತಕ ಸಿಡಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ಯುತ್ತಿದ್ದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಸಹಿತ 4 ವಿಕೆಟ್ ಪಡೆದು ಇಂಗ್ಲೆಂಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಬೆನ್ ಸ್ಟೋಕ್ಸ್ ಲಾರ್ಡ್ಸ್ ನಲ್ಲಿ ನಡೆಯುವ ಎರಡನೇ ಪಂದ್ಯದಿಂದ ಹೊರಗುಳಿಯಲಿದ್ದಾರೆ. 
ಕಳೆದ ಸೆಪ್ಟೆಂಬರ್ ನಲ್ಲಿ ಕುಡಿದು ವ್ಯಕ್ತಿಯೊಬ್ಬನ ಮೇಲೆ ಬೆನ್ ಸ್ಟೋಕ್ಸ್ ಹಲ್ಲೆ ಮಾಡಿದ್ದರು. ಈ ಪ್ರಕರಣ ವಿಚಾರಣೆ ಕೋರ್ಟ್ ನಲ್ಲಿ ಇದೇ ಆಗಸ್ಟ್ 6ರಿಂದ ಆರಂಭಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಬೆನ್ ಸ್ಟೋಕ್ಸ್ ಎರಡನೇ ಪಂದ್ಯದಿಂದ ಹೊರಗುಳಿಯಲಿದ್ದಾರೆ. 
ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 9ರಿಂದ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!