ಟೀಂ ಇಂಡಿಯಾ ತಂಡದ ಊಟದ ಮೆನುವಿನಲ್ಲಿ ಗೋಮಾಂಸ, ಅಭಿಮಾನಿಗಳಿಂದ ಆಕ್ರೋಶ!
ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇನ್ನು ಲಾರ್ಡ್ಸ್ ಟೆಸ್ಟ್ ನಲ್ಲಿ ಟೀಂ ಇಂಡಿಯಾಗೆ ನೀಡಿರುವ ಊಟದ...
ಲಂಡನ್: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇನ್ನು ಲಾರ್ಡ್ಸ್ ಟೆಸ್ಟ್ ನಲ್ಲಿ ಟೀಂ ಇಂಡಿಯಾಗೆ ನೀಡಿರುವ ಊಟದ ಮೆನುವಿನಲ್ಲಿ ಗೋಮಾಂಸವನ್ನು ಪಟ್ಟಿ ಮಾಡಿರುವುದಕ್ಕೆ ನೇಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಭೋಜನ ವಿರಾಮಕ್ಕೆ ಇರುವ ಆಹಾರಗಳ ಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂಕ್ರಣ ಮಂಡಳಿ(ಬಿಸಿಸಿಐ) ತನ್ನ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿತ್ತು. ಇದರಲ್ಲಿ ಬ್ರೇಸ್ಡ್ ಬೀಫ್ ಪಾಸ್ತಾ ಆಹಾರವನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ.
ಟೀಂ ಇಂಡಿಯಾದ ಆಟಗಾರರ ಭೋಜನಕ್ಕೆ ಗೋಮಾಂಸದ ಆಹಾರವನ್ನು ಆಯ್ಕೆ ನೀಡಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಟೆಸ್ಟ್ ಪಂದ್ಯದ ವೇಳೆ ಎರಡೂ ತಂಡಗಳ ಆಟಗಾರರಿಗೆ ಒಂದೇ ರೀತಿಯ ಆಹಾರವನ್ನು ನೀಡಲಾಗುತ್ತದೆ. ಯಾವ ಆಹಾರವನ್ನು ತಿನ್ನಬೇಕು ಎನ್ನುವುದು ಆಟಗಾರರ ವೈಯಕ್ತಿಕ ಆಯ್ಕೆ ಆಗಿರುತ್ತದೆ. ಕೇವಲ ಭಾರತ ತಂಡಕ್ಕೆ ಮಾತ್ರ ನೀಡಿರುವ ಆಹಾರ ಇದಲ್ಲ. ಇಂಗ್ಲೆಂಡ್ ಆಟಗಾರರು ಬೀಫ್ ತಿನ್ನುತ್ತಾರೆ ಎಂಬುದು ಇಲ್ಲಿ ಮುಖ್ಯ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.