ಅಜಿಂಕ್ಯ ರೆಹಾನೆ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್: 329ಕ್ಕೆ ಭಾರತ ಆಲೌಟ್‌

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ 329ಕ್ಕೆ ತನ್ನ ಎಲ್ಲಾ ವಿಕೆಟ್ ಗಳನ್ನು ....

ನಾಟಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ 329ಕ್ಕೆ ತನ್ನ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿದೆ.
ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 329 ರನ್‌ ಗಳಿಸಿದೆ. ಚೊಚ್ಚಲ ಟೆಸ್ಟ್‌ ಪಂದ್ಯವನ್ನಾಡುತ್ತಿರುವ ರಿಷಬ್‌ ಪಂತ್‌ 24 ರನ್‌ ಗಳಿಸಿ ಬ್ರಾಡ್‌ಗೆ ವಿಕೆಟ್‌ ಒಪ್ಪಿಸಿದರು. 
ಇದಕ್ಕು ಮುನ್ನ ನಾಯಕ ವಿರಾಟ್ ಕೊಹ್ಲಿ (97)  ರನ್ ಗಳಿಸಿ ಶತಕ ವಂಚಿತರಾದರೂ ಅದ್ಭುತ ಆಟ ಪ್ರದರ್ಶಿಸಿದರು. ಕೊಹ್ಲಿಗೆ ಅಜಿಂಕ್ಯ ರೆಹಾನೆ ಉತ್ತಮ ಸಾಥ್ ನೀಡಿ 81 ರನ್ ಗಳಿಸಿದರು.
ಮೊದಲ ದಿನದಾಟದಲ್ಲಿ ಉತ್ತಮ ಅದ್ಭುತ ಆಟ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ 152 ಎಸೆತಗಳಲ್ಲಿ 11 ಬೌಂಡರಿ ನೆರವಿನೊಂದಿಗೆ 97 ರನ್ ಗಳಿಸಿದರೆ, ಅಜಿಂಕ್ಯಾ ರಹಾನೆ 131 ಎಸೆತಗಳಲ್ಲಿ 12 ಬೌಂಡರಿಗಳೊಂದಿಗೆ 81 ರನ್ ಗಳಿಸಿದರು. ಕೊಹ್ಲಿ ನಂತರ ಕ್ರೀಸ್ ಗೆ ಇಳಿದ ಹಾರ್ದಿಕ್ ಪಾಂಡ್ಯ 18 ರನ್ ಗಳಿಸಿ ಔಟ್ ಆದರು.
ಇಂಗ್ಲೆಂಡ್ ಪರ ಕ್ರಿಸ್ ಬ್ರಾಡ್‌, ಜೇಮ್ಸ್ ಆಂಡರ್‌ಸನ್‌, ಕ್ರಿಸ್‌ ವೋಕ್ಸ್‌ ತಲಾ ಮೂರು ವಿಕೆಟ್‌ ಪಡೆದರು. ರಶೀದ್‌ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!