ವಿರಾಟ್ ಕೊಹ್ಲಿ 
ಕ್ರಿಕೆಟ್

ಇಂಗ್ಲೆಂಡ್ - ಭಾರತ 3ನೇ ಟೆಸ್ಟ್: ದಾದಾ ದಾಖಲೆ ಮುರಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಇಂಗ್ಲೆಂಡ್ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಮಿಸ್ ಮಾಡಿಕೊಂಡರೂ ನಾಯಕನಾಗಿ...

ನಾಟಿಂಗ್‌ಹ್ಯಾಮ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಇಂಗ್ಲೆಂಡ್ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಮಿಸ್ ಮಾಡಿಕೊಂಡರೂ ನಾಯಕನಾಗಿ ವಿದೇಶದಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆ ಮುರಿದಿದ್ದಾರೆ.
ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆದ ಮೂರನೇ ಟೆಸ್ಟ್ ನ ಮೊದಲ ದಿನವೇ ಕೊಹ್ಲಿ ಈ ಸಾಧನೆ ಮಾಡಿದ್ದು, ವಿದೇಶದಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಟೀಮ್ ಇಂಡಿಯಾ ನಾಯಕ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಮೊದಲ ಟೆಸ್ಟ್ ಪಂದ್ಯದಲ್ಲಷ್ಟೇ ಇಂಗ್ಲೆಂಡ್ ನೆಲದಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿರುವ ಕೊಹ್ಲಿ, ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ದಾಖಲೆಯನ್ನು ಸರಿಗಟ್ಟಿದ್ದರು. ಅಲ್ಲದೆ ನಾಯಕನಾಗಿ ಇಂಗ್ಲೆಂಡ್ ನೆಲದಲ್ಲಿ ಆಡಿದ ಚೊಚ್ಚಲ ಪಂದ್ಯದಲ್ಲೇ ಶತಕ ಸಾಧನೆ ಮಾಡಿದ್ದರು. 
ಇದೀಗ ಟೆಸ್ಟ್ ನಾಯಕನಾಗಿ ವಿದೇಶದಲ್ಲಿ ನಡೆದ 30 ಇನ್ನಿಂಗ್ಸ್‌ಗಳಲ್ಲಿ 1731 ರನ್ ಗಳಿಸಿದ್ದಾರೆ.
ಇನ್ನು ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ತಾವು ಆಡಿರುವ 43 ಇನ್ನಿಂಗ್ಸ್‌ಗಳಲ್ಲಿ 1591 ರನ್ ಗಳಿಸಿದ್ದಾರೆ. 
ಅಂತೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕನಾಗಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದವರ ಪೈಕಿ ಮಹೇಂದ್ರ ಸಿಂಗ್ ಧೋನಿ(10) ನಂತರದ ಸ್ಥಾನದಲ್ಲಿ ಕೊಹ್ಲಿ(8) ಗುರುತಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು