ಗ್ಯಾರಿ ಕರ್ಸ್ಟನ್ 
ಕ್ರಿಕೆಟ್

ಆರ್ ಸಿಬಿ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ

ಈಗಿನಿಂದಲೇ 2019ರ ಐಪಿಎಲ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ,...

ಬೆಂಗಳೂರು: ಈಗಿನಿಂದಲೇ 2019ರ ಐಪಿಎಲ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಟೀಂ ಇಂಡಿಯಾ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಅವರನ್ನು ತನ್ನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.
ಕಳೆದ ಐಪಿಎಲ್ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿತು. ಹೀಗಾಗಿ ಸಪೋರ್ಟಿಂಗ್ ಸ್ಟಾಫ್​ನಲ್ಲಿ ಚೇಂಜಸ್ ಮಾಡಲು ಹೊರಟಿದ್ದು, ಆರ್​ಸಿಬಿ ಫ್ರಾಂಚೈಸಿ, ತಂಡದ ಮುಖ್ಯ ಕೋಚ್ ಆಗಿದ್ದ ಡೇನಿಯಲ್ ವೆಟ್ಟೋರಿ ಅವರನ್ನು ಇತ್ತೀಚಿಗೆ ವಜಾಗೊಳಿಸಿತ್ತು. ಇದೀಗ ಅವರ ಸ್ಥಾನಕ್ಕೆ ಗ್ಯಾರಿ ಅವರನ್ನು ನೇಮಕ ಮಾಡಿದೆ.
ಈ ಹಿಂದೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕೋಚ್ ಆಗಿ ಕೆಲಸ ಮಾಡಿದ್ದ ಗ್ಯಾರಿ ಅವರು 2011ರ ವಿಶ್ವಕಪ್ ವೇಳೆ ಭಾರತ ತಂಡಕ್ಕೆ ಮಾರ್ಗದರ್ಶನ ಮಾಡಿದ್ದರು.
ದಕ್ಷಿಣ ಆಫ್ರಿಕಾ ಮಾಜಿ ಆಟಗಾರ ಗ್ಯಾರಿ ಅವರು 2018ರಲ್ಲಿ ಆರ್ ಸಿಬಿ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಂಡಿದ್ದರು.
ತಮ್ಮನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಿದ ಆರ್ ಸಿಬಿ ಫ್ರಾಂಚೈಸಿಗೆ ಧನ್ಯವಾದ ಹೇಳಿದ ಗ್ಯಾರಿ, ಕಳೆದ ಆವೃತ್ತಿಯಲ್ಲಿ ಮುಖ್ಯ ಕೋಚ್ ವೆಟ್ಟೋರಿ ಕೈಕೆಳಗೆ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು ಮತ್ತು ಆ ಅನುಭವವನ್ನು ಸಂಪೂರ್ಣವಾಗಿ ಆನಂದಿಸಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

News wrap 10-03-2026| Israel Iran conflict: ಎಲ್ ಪಿಜಿ ಪೂರೈಕೆ ಕೊರತೆ, ಒತ್ತಡದಲ್ಲಿ ಹೊಟೆಲ್ ಉದ್ಯಮ, ಬ್ಯಾಡಗಿ ಮೆಣಸಿನಕಾಯಿ ವರ್ತಕರಿಗೆ ಸಂಕಷ್ಟ; ಮುಷ್ಕರ: ಮಾರ್ಚ್ 11ರಿಂದ ಆರೋಗ್ಯ ಸೇವೆಗಳು ಸ್ಥಗಿತ: ಸಮಸ್ಯೆ ಬಗೆಹರಿಸಲಿದ್ದೇವೆ- ದಿನೇಶ್ ಗುಂಡೂರಾವ್

ಹನಿಟ್ರ್ಯಾಪ್‌: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್‌ ಡಿಸೈನರ್‌ ಬಂಧನ!

ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ ಆದೇಶ

SCROLL FOR NEXT