ವಿಶ್ವಕಪ್ 2019 
ಕ್ರಿಕೆಟ್

'ಭಾರತಕ್ಕೆ ಕ್ರಿಕೆಟ್ ವಿಶ್ವಕಪ್'!

2019ರ ವಿಶ್ವಕಪ್ ಗೆ ಇನ್ನು ಕೆಲ ತಿಂಗಳುಗಳಷ್ಟೇ ಬಾಕಿಯಿದ್ದು ಟ್ರೋಫಿ ಗೆಲ್ಲಲು ಎಲ್ಲಾ ತಂಡಗಳು ಸರ್ವ ಪ್ರಯತ್ನಗಳನ್ನು ನಡೆಸುತ್ತಿವೆ. ಈ ಮಧ್ಯೆ ಭಾರತಕ್ಕೆ ಕ್ರಿಕೆಟ್ ವಿಶ್ವಕಪ್ ಟ್ರೋಫಿ ಬಂದಿದೆ...

ನವದೆಹಲಿ: 2019ರ ವಿಶ್ವಕಪ್ ಗೆ ಇನ್ನು ಕೆಲ ತಿಂಗಳುಗಳಷ್ಟೇ ಬಾಕಿಯಿದ್ದು ಟ್ರೋಫಿ ಗೆಲ್ಲಲು ಎಲ್ಲಾ ತಂಡಗಳು ಸರ್ವ ಪ್ರಯತ್ನಗಳನ್ನು ನಡೆಸುತ್ತಿವೆ. ಈ ಮಧ್ಯೆ ಭಾರತಕ್ಕೆ ಕ್ರಿಕೆಟ್ ವಿಶ್ವಕಪ್ ಟ್ರೋಫಿ ಬಂದಿದೆ. 
ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ನಡೆಯಲಿದ್ದು ಈ ಪ್ರಯುಕ್ತ ವಿಶ್ವಕಪ್ ಆಡಲಿರುವ ದೇಶಗಳಲ್ಲಿ ಟ್ರೋಫಿಯ ಪ್ರದರ್ಶನ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ವಿಶ್ವಕಪ್ ಟ್ರೋಫಿ ಭಾರತಕ್ಕೆ ಬಂದಿದ್ದು ದೇಶದ 9 ಮಹಾನಗರಗಳಲ್ಲಿ ಟ್ರೋಫಿ ಅನಾವರಣ ಮಾಡಲಾಗುತ್ತದೆ. 
ರಾಷ್ಟ್ರ ರಾಜಧಾನಿ ದೆಹಲಿ, ಸಿಲಿಕಾನ್ ಸಿಟಿ ಬೆಂಗಳೂರು, ಮುಂಬೈ ಹಾಗೂ ಕೊಲ್ಕತ್ತಾಗಳಲ್ಲಿ ಮೊದಲಿಗೆ ಟ್ರೋಫಿಯನ್ನು ಪ್ರದರ್ಶನ ಮಾಡಲಾಗುತ್ತದೆ. ಡಿಸೆಂಬರ್ 8ರಂದು ಬೆಂಗಳೂರಿನ ಕೋರಮಂಗಲದ ಹೊಸೂರು ರಸ್ತೆಯಲ್ಲಿರುವ ಫೋರಂ ಮಾಲ್ ನಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತದೆ. 
ಡಿಸೆಂಬರ್ 2ರಂದು ಮುಂಬೈನ ವೆಸ್ಟ್ ಮಲಾಡದ ಇನ್ಫಿನಿಟಿ ಮಾಲ್ ನಲ್ಲಿ ಪ್ರದರ್ಶನಕ್ಕೆ ಅಣಿ ಮಾಡಲಾಗಿದೆ. ನಂತರ ಡಿಸೆಂಬರ್ 15ರಂದು ಕೋಲ್ಕತ್ತಾದಲ್ಲಿ ನಂತರ ಡಿಸೆಂಬರ್ 23ರಂದು ಕೊನೆಯ ಬಾರಿಗೆ ದೆಹಲಿಯಲ್ಲಿ ಟ್ರೋಫಿ ಪ್ರದರ್ಶನ ನಡೆಯಲಿದೆ. 
ಮುಂದಿನ ವರ್ಷ ಮೇ 30 ರಿಂದ ಜುಲೈ 14ರವರೆಗೆ ಇಂಗ್ಲೆಂಡ್ ನಲ್ಲಿ ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್ ಟೂರ್ನಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!