ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ವಿಕೆಟ್ ಕಿತ್ತು ಮೈದಾನದಲ್ಲಿ ಕುಣಿದಾಡಿದ ಕೊಹ್ಲಿ, ನೋಡಿದ್ರೆ ನಗು ಬರುತ್ತೆ, ವಿಡಿಯೋ ವೈರಲ್!

ಆಸ್ಟ್ರೇಲಿಯಾ ಇಲೆವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ವಿಕೆಟ್ ಪಡೆದು ಸಂಭ್ರಮಿಸಿದ್ದನ್ನು...

ವಿರಾಟ್ ಕೊಹ್ಲಿ
Vishwanath S
Updated On : 1 Dec 2018, 5:21 am
ಸಿಡ್ನಿ: ಆಸ್ಟ್ರೇಲಿಯಾ ಇಲೆವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ವಿಕೆಟ್ ಪಡೆದು ಸಂಭ್ರಮಿಸಿದ್ದನ್ನು ನೋಡಿದ್ರೆ ನಿಮಗೂ ನಗು ಬರೋದು ಗ್ಯಾರಂಟಿ. 
ಆಸೀಸ್ ಪರ ಶತಕ ಸಿಡಿಸಿದ್ದ ವಿಕೆಟ್ ಕೀಪರ್ ಹ್ಯಾರಿ ನೀಲ್ಸನ್ ಅವರ ವಿಕೆಟ್ ಅನ್ನು ಕೊಹ್ಲಿ ಪಡೆದಿದ್ದಾರೆ. ಇನ್ನು ವಿಕೆಟ್ ಪಡೆಯುತ್ತಿದಂತೆ ಅಚ್ಚರಿ ವ್ಯಕ್ತಪಡಿಸಿದ ಕೊಹ್ಲಿ ಬಳಿಕ ಆಟಗಾರರತ್ತ ನೋಡಿ ಸಂಭ್ರಮಿಸಿದರು. 
ಆಸೀಸ್ ಇಲೆವೆನ್ ತಂಡದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ 7 ಓವರ್ ಮಾಡಿದ್ದ ವಿರಾಟ್ ಕೊಹ್ಲಿ ಒಂದು ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ. 

Advertisement

Advertisement

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 358 ರನ್ ಪೇರಿಸಿತ್ತು. ಇದಕ್ಕೆ ಪ್ರತಿಯಾಗಿ ಆಸ್ಟ್ರೇಲಿಯಾ 544 ರನ್ ಗಳ ಪೇರಿಸಿ 183 ರನ್ ಗಳ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement