ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಮೈ ಮರೆತು ಮೈದಾನದಲ್ಲೇ ಕೊಹ್ಲಿಯಿಂದ ಮೈಕಲ್ ಜಾಕ್ಸನ್ ಸ್ಟೇಪ್; ನೀವು ಹಿಂದೆಂದೂ ಕಂಡಿರದ ಡ್ಯಾನ್ಸ್, ವಿಡಿಯೋ ವೈರಲ್!

ಆತಿಥೇಯ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಇನ್ನು ಪಂದ್ಯದ ನಡುವೆ ವಿರಾಟ್ ಕೊಹ್ಲಿ ಮೈದಾನದಲ್ಲಿ...

ವಿರಾಟ್ ಕೊಹ್ಲಿ
Vishwanath S
Updated On : 8 Dec 2018, 12:17 pm
ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಇನ್ನು ಪಂದ್ಯದ ನಡುವೆ ವಿರಾಟ್ ಕೊಹ್ಲಿ ಮೈದಾನದಲ್ಲಿ ವಿಶೇಷ ನೃತ್ಯ ಪ್ರದರ್ಶನ ಮಾಡಿದ್ದು ಇದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. 
ಅಡಿಲೇಡ್ ಓವಲ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಎರಡನೇ ದಿನದಾಟದ ವೇಳೆ ಭಾರತ ಫೀಲ್ಡಿಂಗ್ ಮಾಡುತ್ತಿದ್ದಾಗ ವಿರಾಟ್ ಕೊಹ್ಲಿ ಕೆಲ ಡ್ಯಾನ್ಸ್ ಸ್ಟೆಪ್ ಗಳನ್ನು ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 250 ರನ್ ಗಳಿಗೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ 235 ರನ್ ಗಳಿಗೆ ಆಲೌಟ್ ಆಗಿದೆ. ಸದ್ಯ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು 34 ಓವರ್ ಮುಕ್ತಾಯಕ್ಕೆ 2 ವಿಕೆಟ್ ನಷ್ಟಕ್ಕೆ 95 ರನ್ ಪೇರಿಸಿದ್ದು 110 ರನ್ ಗಳ ಮುನ್ನಡೆಯಲ್ಲಿದೆ. ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರ ಬ್ಯಾಟಿಂಗ್ ಮಾಡುತ್ತಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement