ಹರ್ಭಜನ ಸಿಂಗ್ 
ಕ್ರಿಕೆಟ್

ಆ 'ಲಕ್ಕಿ ಚಡ್ಡಿ' ಹರಿದು ಹೋಗದಿದ್ದರೆ ನಾನು ಇನ್ನು ಹೆಚ್ಚು ವಿಕೆಟ್ ಪಡೆಯುತ್ತಿದ್ದೆ: ಹರ್ಭಜನ್ ಹೀಗೆ ಹೇಳಿದ್ದೇಕೆ?

ಟೀಂ ಇಂಡಿಯಾದ ಹಿರಿಯ ಖ್ಯಾತ ಸ್ಪಿನ್ನರ್ ಹರ್ಭಜನ್ ಸಿಂಗ್ ತಮ್ಮ ಆಕ್ರಮಣಕಾರಿ ಬೌಲಿಂಗ್ ದಾಳಿಯ ಮೂಲಕ ಎದುರಾಳಿಗಳ ನಿದ್ದೆಗೆಡಿಸಿದ್ದರು. ಸದ್ಯ ಕ್ರಿಕೆಟ್ ನಿಂದ ದೂರ ಉಳಿದಿರುವ ಅವರು...

ಟೀಂ ಇಂಡಿಯಾದ ಹಿರಿಯ ಖ್ಯಾತ ಸ್ಪಿನ್ನರ್ ಹರ್ಭಜನ್ ಸಿಂಗ್ ತಮ್ಮ ಆಕ್ರಮಣಕಾರಿ ಬೌಲಿಂಗ್ ದಾಳಿಯ ಮೂಲಕ ಎದುರಾಳಿಗಳ ನಿದ್ದೆಗೆಡಿಸಿದ್ದರು. ಸದ್ಯ ಕ್ರಿಕೆಟ್ ನಿಂದ ದೂರ ಉಳಿದಿರುವ ಅವರು ಟಿವಿ ಶೋಗಳಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. 
ಇನ್ನು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹರ್ಭಜನ್ ಸಿಂಗ್ ಅವರು ತಮ್ಮ ಸಕ್ಸಸ್ ಬಗ್ಗೆ ಹೇಳಿಕೊಂಡಿದ್ದಾರೆ. ನನ್ನ ಸಕ್ಸಸ್ ಗೆ ನನ್ನ ಲಕ್ಕಿ ಅಂಡರ್ ವೇರ್ ಕಾರಣ ಎಂದು ಹೇಳಿದ್ದಾರೆ. ನನ್ನ ಬಳಿ ಲಕ್ಕಿ ಅಂಡರ್ ವೇರ್ ಒಂದಿತ್ತು. ಅದನ್ನು ಧರಿಸಿ ಆಡಿದಾಗಲೆಲ್ಲಾ ಒಳ್ಳೆಯ ಪ್ರದರ್ಶನ ನೀಡುತ್ತಿದ್ದೆ. ಅಲ್ಲದೆ ಆ ಪಂದ್ಯಗಳಲ್ಲಿ ಹೆಚ್ಚು ವಿಕೆಟ್ ಗಳನ್ನು ಪಡೆಯುತ್ತಿದ್ದೆ. ಆದರೆ ಸತತವಾಗಿ ಉಪಯೋಗಿಸಿದ್ದರಿಂದ ಆ ಚಡ್ಡಿ ಹರಿದುಹೋಗಿತ್ತು. ಇಲ್ಲದಿದ್ದರೆ ನಾನು ಇನ್ನಷ್ಟು ವಿಕೆಟ್ ಗಳನ್ನು ಪಡೆಯುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. 
ಟೀಂ ಇಂಡಿಯಾದ ಪರ 103 ಟೆಸ್ಟ್ ಪಂದ್ಯಗಳನ್ನು ಆಡಿರುವ ಹರ್ಭಜನ್ ಸಿಂಗ್ 417 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 236 ಏಕದಿನ ಪಂದ್ಯದಲ್ಲಿ 269 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್