ಟೀಂ ಇಂಡಿಯಾ 
ಕ್ರಿಕೆಟ್

ತೀವ್ರ ಕುತೂಹಲ ಕೆರಳಿಸಿದ ಟೆಸ್ಟ್: ಗೆಲುವಿಗಾಗಿ ಭಾರತ 6 ವಿಕೆಟ್ ಕೀಳಬೇಕು!

ಆತಿಥೇಯ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ರೋಚಕ ಹಂತಕ್ಕೆ ತಲುಪಿದೆ. ನಾಳೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೋ ನೋಡಬೇಕು...

ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ರೋಚಕ ಹಂತಕ್ಕೆ ತಲುಪಿದೆ. ನಾಳೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೋ ನೋಡಬೇಕು. 
ಅಡಿಲೇಡ್ ಓವಲ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 307 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಆಸ್ಟ್ರೇಲಿಯಾಕ್ಕೆ ಗೆಲ್ಲಲ್ಲು 323 ರನ್ ಗಳ ಟಾರ್ಗೆಟ್ ನೀಡಲಾಯಿತು. 
ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ನಾಲ್ಕನೇ ದಿನದಾಟದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 104 ರನ್ ಪೇರಿಸಿದ್ದು ಇನ್ನು ಆಸೀಸ್ ಗೆಲ್ಲಲು 219 ರನ್ ಅವಶ್ಯಕತೆ ಇದೆ. ಇನ್ನು ಭಾರತ ಈ ಪಂದ್ಯ ಗೆಲ್ಲಲು 6 ವಿಕೆಟ್ ಗಳನ್ನು ಪಡೆಯಬೇಕಿದೆ. 
ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಪರ ಕೆಎಲ್ ರಾಹುಲ್ 44, ಪೂಜಾರ 71, ವಿರಾಟ್ ಕೊಹ್ಲಿ 34, ಅಜಿಂಕ್ಯ ರಹಾನೆ 70, ರನ್ ಪೇರಿಸಿದ್ದಾರೆ. ಬೌಲಿಂಗ್ ನಲ್ಲಿ ನಾಥನ್ ಲ್ಯಾನ್ 6 ವಿಕೆಟ್ ಮತ್ತು ಮಿಚೇಲ್ ಸ್ಟಾರ್ಕ್ 3 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT