ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಅಡಿಲೇಡ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು

ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ.

ಪಂದ್ಯ ಗೆದ್ದ ಸಂಭ್ರಮದಲ್ಲಿ ಟೀಂ ಇಂಡಿಯಾ
Srinivasa Murthy VN
Updated On : 10 Dec 2018, 4:36 am
ಅಡಿಲೇಡ್: ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ.
ಭಾರತ ನೀಡಿದ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡ 291 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ 31 ರನ್ ಗಳ ಅಂತರದಲ್ಲಿ ಮಂಡಿಯೂರಿತು. ಆಸ್ಟ್ರೇಲಿಯಾ ಪರ ಬಾಲಂಗೋಚಿ ಬ್ಯಾಟ್ಸಮನ್ ಗಳಾದ ನಾಥನ್ ಲಿಯಾನ್ (ಅಜೇಯ 38)ರನ್, ಮಿಚೆಲ್ ಸ್ಟಾರ್ಕ್ (28 ರನ್) ಮತ್ತು ಪ್ಯಾಟ್ ಕಮಿನ್ಸ್ (28 ರನ್) ಹರಸಾಹಸ ಪಟ್ಟರಾದರೂ, ಭಾರತೀಯ ಬೌಲರ್ ಗಳ ಎದುರು ಅವರ ಆಟ ನಡೆಯಲಿಲ್ಲ. ಅಂತಿಮವಾಗಿ ಆರ್ ಅಶ್ವಿನ್ ಹೇಜಲ್ ವುಡ್ ವಿಕೆಟ್ ಪಡೆಯುವುದರೊಂದಿಗೆ ಆಸಿಸ್ ನೆಲದಲ್ಲಿ ಭಾರತ ತಂಡ 31 ರನ್ ಗಳ ಐತಿಹಾಸಿಕ ಗೆಲುವು ಸಾಧಿಸಿತು.

Advertisement

Advertisement

ಭಾರತದ ಪರ ಜಸ್ ಪ್ರೀತ್ ಬುಮ್ರಾ, ಆರ್ ಅಶ್ವಿನ್ ಮತ್ತು ಮಹಮದ್ ಶಮಿ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು
ಆಸಿಸ್ ನೆಲದಲ್ಲಿ ಸರಣಿಯ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿರುವುದು ಭಾರತಕ್ಕೆ ಐತಿಹಾಸಿಕ ಸಾಧನೆಯಾಗಿದ್ದು, ಈ ವರೆಗೂ ಆಸಿಸ್ ನೆಲದಲ್ಲಿ ಭಾರತ ಈ ಸಾಧನೆ ಮಾಡಿರಲಿಲ್ಲ. ಕ್ರಿಕೆಟ್ ಇತಿಹಾಸದಲ್ಲೇ ಆಸಿಸ್ ನೆಲದಲ್ಲಿ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ಜಯ ಸಾಧಿಸಿರುವುದು ಇದೇ ಮೊದಲು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments