ಸಂಗ್ರಹ ಚಿತ್ರ 
ಕ್ರಿಕೆಟ್

ಮತ್ತೆ ಮರುಕಳಿಸಿತು ಇತಿಹಾಸ, ಅಂದು ದ್ರಾವಿಡ್, ಇಂದು ಚೇತೇಶ್ವರ ಪೂಜಾರ!

ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಅವರನ್ನು ಸವ್ಯಸಾಚಿ ಮತ್ತು ಭಾರತೀಯ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಹೋಲಿಕೆ ಮಾಡಲಾಗುತ್ತಿದೆ. ಆದರೆ ಕಾಕತಾಳಿಯವೋ ಏನೋ ಎಂಬಂತೆ ಈ ಹಿಂದೆ ದ್ರಾವಿಡ್ ಮಾಡಿದ್ದ ಅದೇ ಸಾಧನೆಯನ್ನು ಪೂಜಾರ ಮಾಡಿದ್ದಾರೆ.

ಅಡಿಲೇಡ್: ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಅವರನ್ನು ಸವ್ಯಸಾಚಿ ಮತ್ತು ಭಾರತೀಯ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಹೋಲಿಕೆ ಮಾಡಲಾಗುತ್ತಿದೆ. ಆದರೆ ಕಾಕತಾಳಿಯವೋ ಏನೋ ಎಂಬಂತೆ ಈ ಹಿಂದೆ ದ್ರಾವಿಡ್ ಮಾಡಿದ್ದ ಅದೇ ಸಾಧನೆಯನ್ನು ಪೂಜಾರ ಮಾಡಿದ್ದಾರೆ.
ಹೌದು.. ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ಮತ್ತೆ ಅಪರೂಪದ ಇತಿಹಾಸ ಮರುಕಳಿಸಿದ್ದು 3ನೇ ಕ್ರಮಾಂಕದಲ್ಲಿ ಆಡಿ ತಂಡದ ಬೆನ್ನಿಗೆ ನಿಂತಿದ್ದ ಆಟಗಾರ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ 2003ರಲ್ಲಿ ಇದೇ ಅಡಿಲೇಡ್ ಓವಲ್ ಮೈದಾನದಲ್ಲಿ ಭಾರತ ತಂಡದ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ಭಾರತೀಯ ಕ್ರಿಕೆಟ್ ನ ದಂತಕಥೆ ರಾಹುಲ್ ದ್ರಾವಿಡ್ ಅಂದು ಎರಡೂ ಇನ್ನಿಂಗ್ಸ್ ನಲ್ಲೂ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ತಂಡಕ್ಕೆ ನೆರವಾಗಿ ತಂಡ ಗೆಲುವು ಸಾಧಿಸುವಂತೆ ಮಾಡಿದ್ದರು. ಅಲ್ಲದೆ ಅವರ ಅಮೋಘ ಪ್ರದರ್ಶನಕ್ಕೆ ಪ್ರತಿಫಲವಾಗಿ ಅಂದು ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.
ಇದೀಗ ಅದೇ ಘಟನೆ ಮತ್ತೆ ಪುನರಾವರ್ತನೆಯಾಗಿಗದ್ದು, ಹಾಲಿ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಭಾರತ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಆಡಿದ ಚೇತೇಶ್ವರ ಪೂಜಾರ ಕೂಡ ಎರಡೂ ಇನ್ನಿಂಗ್ಸ್ ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಪೂಜಾರ ದ್ರಾವಿಡ್ ಈ ಹಿಂದೆ ಮಾಡಿದ್ದ ಸಾಧನೆಯನ್ನು ಮಾಡುವ ಮೂಲಕ ತಾವೇ ರಾಹುಲ್ ದ್ರಾವಿಡ್ ರ ಉತ್ತರಾಧಿಕಾರಿ ಎಂಬುದನ್ನು ಮತ್ತೆ ಸಾಬೀತು ಮಾಡಿದ್ದಾರೆ.
ಪೂಜಾರ ಮೊದಲ ಇನ್ನಿಂಗ್ಸ್ ನಲ್ಲಿ 123 ರನ್ ಸಿಡಿಸಿ ಭಾರತ 250 ರನ್ ಗಳ ಗೌರವಾನ್ವಿತ ಮೊತ್ತ ಪೇರಿಸಲು ನೆರವಾದರು. ಅಂತೆಯೇ ಎರಡನೇ ಇನ್ನಿಂಗ್ಸ್ ನಲ್ಲೂ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನ ಮುಂದವರೆಸಿದ ಪೂಜಾರ 71 ರನ್ ಗಳಿಸಿ ಕಾಂಗರೂಗಳಿಗೆ ಸವಾಲಿನ ಗುರಿ ನೀಡಲು ನೆರವಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ